ದುಬೈ: ದುಬೈನಲ್ಲಿ ಇಂದು ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುವ ಮೂಲಕ ಐಪಿಎಲ್ 14ನೇ ಆವೃತ್ತಿಯ ಎರಡನೇ ಇನ್ನಿಂಗ್ಸ್ ಪಂದ್ಯಗಳಿಗೆ ಚಾಲನೆ ದೊರೆಯಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಐತಿಹಾಸಿಕ ದಾಖಲೆಯೊಂದನ್ನು ಬರೆಯಲು ಸಜ್ಜಾಗಿದ್ದಾರೆ.
ಇಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಮೂರು ಸಿಕ್ಸರ್ ಸಿಡಿಸಿದರೆ ಟಿ20 ಕ್ರಿಕೆಟ್‌ನಲ್ಲಿ 400ಕ್ಕೂ ಅಧಿಕ ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ ಆಟಗಾರ ಎಂಬ ತಿಹಾಸಿಕ ಸಾಧನೆಯನ್ನು ಮಾಡಲಿದ್ದಾರೆ. ಅವರು ಈವರೆಗೆ ಟಿ20 ಕ್ರಿಕೆಟ್‌ನಲ್ಲಿ 397 ಸಿಕ್ಸರ್ ಸಿಡಿಸಿದ್ದು, ಭಾರತೀಯ ಆಟಗಾರರ ಪೈಕಿ ಟಿ20 ಮಾದರಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎನಿಸಿದ್ದಾರೆ.
ಟಿ20 ಮಾದರಿಯಲ್ಲಿ ಸಿಕ್ಸರ್ ಸಿಡಿಸಿದ ಭಾರತದ ಆಟಗಾರರ ಪೈಕಿ ಎರಡನೇ ಸ್ಥಾನದಲ್ಲಿರುವ ಸುರೇಶ್ ರೈನಾ 324 ಸಿಕ್ಸರ್ ಸಿಡಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಆರ್‌ಸಿಬಿ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದ್ದಾರೆ. ಅವರು 315 ಸಿಕ್ಸರ್ ಸಿಡಿಸಿದ್ದಾರೆ. 303 ಸಿಕ್ಸರ್ ಸಿಡಿಸಿರುವ ಎಂಎಸ್ ಧೋನಿ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
PublicNext
19/09/2021 03:17 pm