ದುಬೈ: ಋತುರಾಜ್ ಗಾಯಕ್ವಾಡ್ ಏಕಾಂಗಿ ಹೋರಾಟ, ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಸುರೇಶ್ ರೈನಾ ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್‌ಗೆ 157 ರನ್‌ಗಳ ಗುರಿ ನೀಡಿದೆ.
ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ ದ್ವಿತೀಯಾರ್ಧದ ಟೂರ್ನಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಚೆನ್ನೈ ಸೂಪರ್ ಕಿಂಗ್ಸ್ 6 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿದೆ. ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಋತುರಾಜ್ ಗಾಯಕ್ವಾಡ್ 88 ರನ್ (58 ಎಸೆತ, 9 ಬೌಂಡರಿ, 4 ಸಿಕ್ಸರ್) ಗಳಿಸಿದರು. ಆದರೆ ನಾಯಕ ಮಹೇಂದ್ರ ಸಿಂಗ್ ಧೋನಿ 3 ರನ್ ಹಾಗೂ ಸುರೇಶ್ ರೈನಾ 4 ರನ್ ಮಾತ್ರ ಗಳಿಸಲು ಶಕ್ತರಾದರು.
PublicNext
19/09/2021 09:21 pm