ದುಬೈ: ಋತುರಾಜ್ ಗಾಯಕ್ವಾಡ್ ಸ್ಫೋಟಕ ಬ್ಯಾಟಿಂಗ್, ದೀಪಕ್ ಚಹರ್ ಬೌಲಿಂಗ್ ಸಹಾಯರಿಂದ ಮುಂಬೈ ಇಂಡಿಯನ್ಸ್ ವಿರುದ್ಧ 20 ರನ್‌ಗಳಿಂದ ಜಯ ಗಳಿಸಿದ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ಖಾತೆ ತೆರೆದಿದೆ.
ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ ದ್ವಿತೀಯಾರ್ಧದ ಟೂರ್ನಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಚೆನ್ನೈ ಸೂಪರ್ ಕಿಂಗ್ಸ್ 6 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಲು ಶಕ್ತವಾಯಿತು. ಮುಂಬೈ ತಂಡದ ಪರ ಸೌರಭ್ ತಿವಾರಿ ಅಜೇಯ 50 ರನ್ ಗಳಿಸಿದರು. ಉಳಿದಂತೆ ಕ್ವಿಂಟನ್ ಡಿ ಕಾಕ್ 17 ರನ್, ಅನ್‌ಮೋಲ್‌ಪ್ರೀತ್ ಸಿಂಗ್ 16 ರನ್, ಕೀರನ್ ಪೊಲಾರ್ಡ್ 15 ರನ್ ಗಳಿಸಿದರು.
ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಪರ ಏಕಾಂಗಿ ಹೋರಾಟ ನಡೆಸಿದ್ದ ಋತುರಾಜ್ ಗಾಯಕ್ವಾಡ್ 88 ರನ್ (58 ಎಸೆತ, 9 ಬೌಂಡರಿ, 4 ಸಿಕ್ಸರ್) ಗಳಿಸಿದ್ದರು. ಆದರೆ ನಾಯಕ ಮಹೇಂದ್ರ ಸಿಂಗ್ ಧೋನಿ 3 ರನ್ ಹಾಗೂ ಸುರೇಶ್ ರೈನಾ 4 ರನ್ ಮಾತ್ರ ಗಳಿಸಲು ಶಕ್ತರಾದರು.
PublicNext
19/09/2021 11:24 pm