ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಐಪಿಎಲ್ 14ನೇ ಆವೃತ್ತಿಯ 31ನೇ ಪಂದ್ಯದ ಇದಾಗಿದ್ದು, ಇಯಾನ್ ಮಾರ್ಗನ್ ನೇತೃತ್ವದ ಕೆಕೆಆರ್ ತಂಡವು ಆರ್‌ಸಿಬಿ ವಿರುದ್ಧ ಹೋರಾಡಲಿದೆ. ಈ ಆವೃತ್ತಿಯ ಐಪಿಎಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ ಪಡೆ ಈಗ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಈ ಸ್ಥಾನವನ್ನು ಮತ್ತಷ್ಟು ಉತ್ತಮ ಪಡಿಸಿಕೊಳ್ಳಲು ಆರ್‌ಸಿಬಿ ಹಂಬಲಿಸುತ್ತಿದೆ.
PublicNext
20/09/2021 07:15 pm