ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಕ್‌ಗೆ ಮತ್ತೊಂದು ಆಘಾತ ನೀಡಿದ ಇಂಗ್ಲೆಂಡ್‌- ಸರಣಿ ರದ್ದು

ಲಂಡನ್‌: ಭದ್ರತಾ ಕಾರಣ ನೀಡಿ ಈ ಹಿಂದೆ ನ್ಯೂಜಿಲೆಂಡ್ ತಂಡವು ಪಾಕಿಸ್ತಾನ ಪ್ರವಾಸ ರದ್ದುಗೊಳಿಸಿದ ಬೆನ್ನಲ್ಲೇ ಇದೀಗ ಇಂಗ್ಲೆಂಡ್‌ ಕೂಡ ಪಾಕ್‌ ಪ್ರವಾಸ ರದ್ದುಗೊಳಿಸಿ ಮತ್ತೊಂದು ಶಾಕ್ ನೀಡಿದೆ.

ಇಂಗ್ಲೆಂಡ್‌ ಪುರುಷರು ಮತ್ತು ಮಹಿಳೆಯರ ತಂಡಗಳೆರಡರ ಮುಂಬರುವ ಪಾಕಿಸ್ತಾನ ಪ್ರವಾಸವನ್ನು ರದ್ದುಗೊಳಿಸಿ ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ ತನ್ನ ನಿರ್ಧಾರ ಪ್ರಕಟಿಸಿದೆ. 'ಪಾಕಿಸ್ತಾನಕ್ಕೆ ಪ್ರಯಾಣಿಸುವುದರ ಬಗ್ಗೆ ಆತಂಕ ವ್ಯಕ್ತವಾಗಿರುವುದು ನಮಗೆ ತಿಳಿದಿದೆ. ಕೋವಿಡ್ ಪರಿಸರದಲ್ಲೂ ಈಗಾಗಲೇ ದೀರ್ಘಾವಧಿಯ ಕಾರ್ಯಾಚರಣೆಯನ್ನು ನಿಭಾಯಿಸಿದ ತಂಡಕ್ಕೆ ಮುಂದಿನ ಪ್ರವಾಸವು ಮತ್ತಷ್ಟು ಒತ್ತಡವನ್ನು ನೀಡುತ್ತದೆ ಎಂದು ನಾವು ನಂಬಿದ್ದೇವೆ' ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ ಹೇಳಿಕೆಯಲ್ಲಿ ತಿಳಿಸಿದೆ.

ಈ ಹಿಂದಿನ ವೇಳಾಪಟ್ಟಿಯಂತೆ ಅಕ್ಟೋಬರ್ 13 ಮತ್ತು 14 ರಂದು ಪುರುಷರ ತಂಡವು ಎರಡು ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಆಡಬೇಕಿತ್ತು. ಮಹಿಳೆಯರ ತಂಡವು ಅಕ್ಟೋಬರ್ 17, 19 ಮತ್ತು 21ರಂದು ಮೂರು ಏಕದಿನ ಪಂದ್ಯಗಳನ್ನು ಆಡಬೇಕಿತ್ತು. ಎಲ್ಲಾ ಪಂದ್ಯಗಳು ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಿಗದಿಯಾಗಿದ್ದವು. ದರೆ ಈ ಎಲ್ಲ ಪಂದ್ಯಗಳೂ ಭದ್ರತಾ ಕಾರಣದಿಂದಾಗಿ ರದ್ದಾಗಿದೆ.

Edited By : Vijay Kumar
PublicNext

PublicNext

21/09/2021 07:20 am

Cinque Terre

37.39 K

Cinque Terre

2