ಅಬುಧಾಬಿ: ಇಲ್ಲಿನ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಐಪಿಎಲ್ 14ನೇ ಆವೃತ್ತಿಯ 31ನೇ ಪಂದ್ಯದಲ್ಲಿ ಕೆಕೆಆರ್ ತಂಡವು ಆರ್‌ಸಿಬಿ ವಿರುದ್ಧ 9 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಕೆಕೆಆರ್ ವಿರುದ್ಧ ಹೀನಾಯ ಸೋಲು ಅನುಭವಿಸಿದ ಬಳಿಕ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ, ಯುವ ಆಟಗಾರ ವೆಂಕಟೇಶ್ ಅಯ್ಯರ್‌ಗೆ ಬ್ಯಾಟಿಂಗ್ ಬಗ್ಗೆ ಪ್ರಮುಖ ಸಲಹೆಗಳನ್ನು ನೀಡುವ ಮೂಲಕ ನೆಟ್ಟಿಗರ ಮನ ಗೆದ್ದಿದ್ದಾರೆ.
ಐಪಿಎಲ್ ಪದಾರ್ಪಣೆ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ ವೆಂಕಟೇಶ್ ಅಯ್ಯರ್ ಕೇವಲ 27 ಎಸೆತಗಳಲ್ಲಿ ಅಜೇಯ 41 ರನ್ ಗಳಿಸುವ ಮೂಲಕ ಬಹುಬೇಗ ಕೆಕೆಆರ್‌ಗೆ ಗೆಲುವು ತಂದುಕೊಟ್ಟರು. ಇದಾದ ಕೆಲವೇ ನಿಮಿಷಗಳ ಬಳಿಕ ವೆಂಕಟೇಶ್ ಅಯ್ಯರ್ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಜೊತೆ ಬ್ಯಾಟಿಂಗ್ ಟಿಪ್ಸ್ ಪಡೆದುಕೊಂಡಿದ್ದರು. ಈ ವಿಡಿಯೋ ಟ್ವಿಟರ್‌ನಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಕೊಹ್ಲಿಯ ನಡೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
PublicNext
21/09/2021 09:38 am