ದುಬೈ: ಐಪಿಎಲ್ 14ನೇ ಆವೃತ್ತಿಯ 33ನೇ (ದ್ವಿತೀಯಾರ್ಧದ 4ನೇ) ಪಂದ್ಯದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹೈದರಾಬಾದ್ ಸನ್ ರೈಸರ್ಸ್ ತಂಡಗಳು ಸೆಣಸಾಡಲಿವೆ.
ಈವರೆಗೂ ನಡೆದಿರುವ ಒಟ್ಟು 8 ಪಂದ್ಯಗಳನ್ನು ಆಡಿರುವ ಡೆಲ್ಲಿ 6ರಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಏಳು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಗೆದ್ದಿರುವ ಸನ್ ರೈಸರ್ಸ್ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಭಾರತದಲ್ಲಿ ನಡೆದ ಮೊದಲಾರ್ಧದ ಐಪಿಎಲ್ ಪಂದ್ಯಗಳಲ್ಲಿ ಸಾಲು ಸಾಲು ಪಂದ್ಯಗಳನ್ನು ಸೋತಿರುವ ಹೈದರಾಬಾದ್ ಸನ್ ರೈಸರ್ಸ್, ಟೂರ್ನಿಯಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳಲು ಸಿದ್ಧತೆ ನಡೆಸಿದೆ.
PublicNext
22/09/2021 10:39 am