ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2021: ಸಂಜು ಸ್ಯಾಮ್ಸನ್ ಗೆ 12 ಲಕ್ಷ ರೂ. ದಂಡ..!

ದುಬೈ : ಕೊನೆಯ ಓವರ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಎರಡು ರನ್ ಗಳಿಂದ ರೋಚಕ ಜಯ ಗಳಿಸಿದೆ. ನಿನ್ನೆ (ಮಂಗಳವಾರ ) ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ನ 32ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ವಿರುದ್ದ ರಾಜಸ್ಥಾನ್ ರಾಯಲ್ಸ್ ಗೆದ್ದು ಬೀಗಿದೆ. ಈ ಸೂಪರ್ ಗೆಲುವಿನ ಹೊರತಾಗಿಯೂ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ದಂಡಕ್ಕೆ ಗುರಿಯಾಗಿದ್ದಾರೆ.

ಹೌದು, ರಾಜಸ್ಥಾನ್ ರಾಯಲ್ಸ್ ತಂಡವು ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣ ಸ್ಯಾಮ್ಸನ್ ದಂಡ ವಿಧಿಸಲಾಗಿದೆ. ಐಪಿಎಲ್ ನ ನೀತಿ ಸಂಹಿತೆ ಪ್ರಕಾರ ನಿಧಾನಗತಿಯ ಬೌಲಿಂಗ್ ಮಾಡಿದರೆ 12 ಲಕ್ಷ ರೂ.ದಂಡ ವಿಧಿಸಲಾಗುತ್ತದೆ. ಅದರಂತೆ ಪಂಜಾಬ್ ವಿರುದ್ದದ ಪಂದ್ಯದಲ್ಲಿ ನಿಧಾನಗತಿಯಲ್ಲಿ ಬೌಲಿಂಗ್ ಪೂರ್ತಿಗೊಳಿಸಿದಕ್ಕೆ 12 ಲಕ್ಷ ರೂ. ದಂಡ ವಿಧಿಸಿದೆ.

ಇಂಡಿಯನ್ ಪ್ರಿಮಿಯರ್ ಲೀಗ್ ನ ಹೊಸ ನೀತಿ ಸಂಹಿತೆ ಪ್ರಕಾರ 20 ಓವರ್ ಗಳನ್ನು 90 ನಿಮಿಷಗಳಲ್ಲಿ ಮುಗಿಸಬೇಕು. ಅಂದರೆ ಇನಿಂಗ್ಸ್ ವೊಂದಕ್ಕೆ 90 ನಿಮಿಷಗಳನ್ನು ನಿಗದಿಪಡಿಸಲಾಗಿದೆ. ಒಂದು ಇನಿಂಗ್ಸ್ ಗೆ 1 ಗಂಟೆ 30 ನಿಮಿಷ ನೀಡಲಾಗುತ್ತಿದೆ. ಹಾಗೆಯೇ ಟೈಮ್-ಔಟ್ ಗಳಿಗಾಗಿ ತೆಗೆದುಕೊಂಡ ಸಮಯವನ್ನು ಕಳೆದು ಮೊದಲ ಒಂದು ಗಂಟೆಯೊಳಗೆ 14.11 ಓವರ್ ಗಳನ್ನು ಬೌಲ್ ಮಾಡಲೇಬೇಕು ಎಂಬ ನಿಯಮವಿದೆ.

ಆದರೆ ಪಂಜಾಬ್ ಕಿಂಗ್ಸ್ ವಿರುದ್ದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಹೆಚ್ಚಿನ ಸಮಯ ತೆಗೆದುಕೊಂಡಿದೆ. ಹೀಗಾಗಿ ದಂಡ ವಿಧಿಸಲಾಗಿದೆ.

Edited By : Nirmala Aralikatti
PublicNext

PublicNext

22/09/2021 05:44 pm

Cinque Terre

83.26 K

Cinque Terre

0