ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

DC vs SRH : ಟಾಸ್ ಗೆದ್ದ ಹೈದರಾಬಾದ್ ಬ್ಯಾಟಿಂಗ್ ಆಯ್ಕೆ

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2021ನ 33ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ಧಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ಫೀಲ್ಡಿಂಗ್ ಅವಕಾಶವನ್ನು ಸ್ವಾಗತಿಸಿದ್ದಾರೆ.

ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಡೆಲ್ಲಿ ತಂಡ 8 ಪಂದ್ಯಗಳಿಂದ 12 ಅಂಕಗಳನ್ನ ಹೊಂದಿದ್ದು, ಈ ಪಂದ್ಯ ಗೆದ್ದು ಮತ್ತೆ ಅಗ್ರಸ್ಥಾನಕ್ಕೇರುವ ತವಕದಲ್ಲಿದೆ. ಇನ್ನೊಂದೆಡೆ, ಕೇನ್ ವಿಲಿಯಮ್ಸನ್ ನೇತೃತ್ವದ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ತಳದಲ್ಲಿದ್ದು, ನಾಕೌಟ್ ಆಸೆ ಜೀವಂತವಾಗಿರಬೇಕಾದರೆ ಈ ಪಂದ್ಯ ಗೆಲ್ಲುವುದು ಬಹಳ ಮುಖ್ಯ.

ತಂಡಗಳು:

ಡೆಲ್ಲಿ ಕ್ಯಾಪಿಟ,ಲ್ಸ್ ತಂಡ: ರಿಷಭ್ ಪಂತ್ (ನಾಯಕ), ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮಾರ್ಕಸ್ ಸ್ಟಾಯ್ನಿಸ್, ಶಿಮ್ರಾನ್ ಹೆಟ್ಮಯರ್, ಅಕ್ಷರ್ ಪಟೇಲ್, ಆರ್. ಅಶ್ವಿನ್, ಕಗಿಸೋ ರಬಡ, ಆನ್ರಿಕ್ ನಾರ್ಜೆ, ಅವೇಶ್ ಖಾನ್.

ಸನ್ರೈಸರ್ಸ್ ಹೈದರಾಬಾದ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಡೇವಿಡ್ ವಾರ್ನರ್, ವೃದ್ಧಿಮಾನ್ ಸಾಹ, ಮನೀಶ್ ಪಾಂಡೆ, ಕೇದಾರ್ ಜಾಧವ್, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಷೀದ್ ಖಾನ್, ಭುನವೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್

Edited By : Nirmala Aralikatti
PublicNext

PublicNext

22/09/2021 07:32 pm

Cinque Terre

63.26 K

Cinque Terre

0

ಸಂಬಂಧಿತ ಸುದ್ದಿ