ದುಬೈ: ಡೇವಿಡ್ ವಾರ್ನರ್, ವೃದ್ಧಿಮಾನ ಸಹಾ, ನಾಯಕ ಕೇನ್ ವಿಲಿಯಮ್ಸನ್ ಹಾಗೂ ಮನೀಶ್ ಪಾಂಡೆ ಬ್ಯಾಟಿಂಗ್ ವೈಫಲ್ಯದ ಪರಿಣಾಮ ಸನ್‌ರೈಸರ್ಸ್ ಹೈದರಾಬಾದ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಗೆ 135 ರನ್‌ಗಳ ಸಾಧಾರಣ ಗುರಿ ನೀಡಿದೆ.
ಐಪಿಎಲ್ 14ನೇ ಆವೃತ್ತಿಯ ಭಾಗವಾಗಿ ದುಬೈನಲ್ಲಿ ನಡೆಯುತ್ತಿರುವ 33ನೇ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಹೈದರಾಬಾದ್ 9 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಲು ಶಕ್ತವಾಯಿತು. ತಂಡದ ಪರ ಅಬ್ದುಲ್ ಸಮದ್ 28 ರನ್ (21 ಎಸೆತ), ರಶೀದ್ ಖಾನ್ 22 ರನ್, ನಾಯಕ ಕೇನ್ ವಿಲಿಯಮ್ಸನ್ ಹಾಗೂ ವೃದ್ಧಿಮಾನ ಸಹಾ ತಲಾ 18 ರನ್ ಗಳಿಸಿದರು.
ಡೆಲ್ಲಿ ಪರ ಕಗಿಸೊ ರಬಾಡ ಮೂರು ವಿಕೆಟ್ ಕಿತ್ತು ಮಿಂಚಿದರೆ, ಎನ್ರಿಚ್ ನಾಕಿಯಾ ಹಾಗೂ ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಪಡೆದು ತಂಡಕ್ಕೆ ಆಸರೆಯಾದರು.
PublicNext
22/09/2021 09:15 pm