ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಐಪಿಎಲ್‌ನಲ್ಲಿ ವಿಶೇಷ ಮೈಲುಗಲ್ಲು ನೆಟ್ಟ ಶಿಖರ್ ಧವನ್

ದುಬೈ: ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಅನುಭವಿ ಬ್ಯಾಟ್ಸ್‌ಮನ್ ಶಿಖರ್ ಧವನ್ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್)ನಲ್ಲಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅವರು ಐಪಿಎಲ್ ಸೀಸನ್ ಒಂದರಲ್ಲಿ ಅತೀ ಹೆಚ್ಚು ಬಾರಿ 400+ ರನ್ ಗಳಿಸಿದ ವಿಶೇಷ ಮೈಲುಗಲ್ಲು ನೆಟ್ಟಿದ್ದಾರೆ.

ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಬುಧವಾರ (ಸೆ.22) ನಡೆದ ಐಪಿಎಲ್ 33ನೇ ಪಂದ್ಯದಲ್ಲಿ ಸನ್ ರೈಸರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ವೇಳೆ ಡೆಲ್ಲಿ ಬ್ಯಾಟ್ಸ್‌ಮನ್‌ ಶಿಖರ್ ಧವನ್ 37 ಎಸೆತಗಳಲ್ಲಿ 42 ರನ್ ಬಾರಿಸಿದ್ದರು. ಈ ರನ್ ಮೂಲಕ ಸೀಸನ್‌ನಲ್ಲಿ 400+ ರನ್ ಗಳಿಸಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಸೀಸನ್ ಒಂದರಲ್ಲಿ ಅತೀ ಹೆಚ್ಚು ಸಾರಿ 400+ ರನ್ ಬಾರಿಸಿದ ದಾಖಲೆ ಪಟ್ಟಿಯಲ್ಲಿ ಸುರೇಶ್ ರೈನಾ ಅಗ್ರಸ್ಥಾನದಲ್ಲಿದ್ದಾರೆ. ಅವರು 9 ಸೀಸನ್‌ನಲ್ಲಿ 400+ ರನ್ ಗಳಿಸಿದ್ದಾರೆ. ಧವನ್ ದ್ವಿತೀಯ ಸ್ಥಾನದಲ್ಲಿದ್ದು, 8 ಸೀಸನ್‌ಗಳಲ್ಲಿ ಅವರು 400+ ರನ್ ಗಳಿಸಿದ್ದಾರೆ. ತೃತೀಯ ಸ್ಥಾನದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಡೇವಿಡ್ ವಾರ್ನರ್ ಇದ್ದಾರೆ. ಮೂವರೂ 7 ಬಾರಿ ಈ ಸಾಧನೆ ಮಾಡಿದ್ದಾರೆ.

Edited By : Vijay Kumar
PublicNext

PublicNext

23/09/2021 09:28 am

Cinque Terre

44.8 K

Cinque Terre

0

ಸಂಬಂಧಿತ ಸುದ್ದಿ