ದುಬೈ: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಬುಧವಾರ (ಸೆ.22)ರಂದು ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎಂಟು ವಿಕೆಟ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಸನ್‌ರೈಸರ್ಸ್ ಹೈದರಾಬಾದ್ ಪರ ಕ್ರೀಸ್‌ನಲ್ಲಿ ಗಟ್ಟಿಯಾಗಿ ನೆಲೆಯೂರಲು ಯಾರಿಗೂ ಸಾಧ್ಯವಾಗಲಿಲ್ಲ. ಪರಿಣಾಮ 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 134 ರನ್‌ಗಳ ಸಾಧಾರಣ ಮೊತ್ತ ಗಳಿಸಲಷ್ಟೇ ಸಾಧ್ಯವಾಯಿತು. ಬಳಿಕ 135 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪೃಥ್ವಿ ಶಾ ಅವರನ್ನು ಬೇಗನೇ ಕಳೆದುಕೊಂಡಿತು. ಆದರೆ ಶಿಖರ್ ಧವನ್, ಶ್ರೇಯಸ್ ಅಯ್ಯರ್ ಮತ್ತು ನಾಯಕ ರಿಷಭ್ ಪಂತ್ ಅವರು ಮೋಹಕ ಬ್ಯಾಟಿಂಗ್ ಮೂಲಕ ತಂಡಕ್ಕೆ ಸುಲಭ ಗೆಲುವು ತಂದುಕೊಟ್ಟರು.
PublicNext
23/09/2021 09:37 am