ಶಾರ್ಜಾ: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡವು ಫಿಲ್ಡಿಂಗ್ ಆಯ್ದುಕೊಂಡಿದೆ.
ಐಪಿಎಲ್ 14ನೇ ಆವೃತ್ತಿಯ ಭಾಗವಾಗಿ ನಡೆಯುತ್ತಿರುವ 36ನೇ ಪಂದ್ಯದಲ್ಲಿ ಉಭಯ ತಂಡಗಳಿಗೂ ಗೆಲುವು ಅಗತ್ಯವಾಗಿದೆ. ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸದ್ಯ ಅಂಕಪಟ್ಟಿಯಲ್ಲಿ ಕೊನೆಯ 2 ಸ್ಥಾನಗಳನ್ನು ಪಡೆದುಕೊಂಡಿವೆ. ಟೂರ್ನಿಯಲ್ಲಿ ಇದುವರೆಗೂ 9 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ 3 ಪಂದ್ಯಗಳಲ್ಲಿ ಜಯಗಳಿಸಿ, 6 ಪಂದ್ಯಗಳಲ್ಲಿ ಸೋತು 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದುಕೊಂಡಿದೆ. ಇನ್ನು 8 ಪಂದ್ಯಗಳನ್ನಾಡಿ, 7 ಪಂದ್ಯಗಳಲ್ಲಿ ಸೋತು ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಜಯ ಗಳಿಸಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
ತಂಡಗಳು ಹೀಗಿವೆ:
ಪಂಜಾಬ್ ಕಿಂಗ್ಸ್ : ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್ ಕೀಪರ್ ), ಮಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ದೀಪಕ್ ಹೂಡಾ, ನಾಥನ್ ಎಲ್ಲಿಸ್, ರವಿ ಬಿಷ್ಣೋಯಿ, ಮೊಹಮ್ಮದ್ ಶಮಿ, ಹರಪ್ರೀತ್ ಬ್ರಾರ್, ಅರ್ಷದೀಪ್ ಸಿಂಗ್.
ಸನ್ ರೈಸರ್ಸ್ ಹೈದರಾಬಾದ್: ಡೇವಿಡ್ ವಾರ್ನರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಮನೀಶ್ ಪಾಂಡೆ, ಕೇದಾರ್ ಜಾಧವ್, ಜೇಸನ್ ಹೋಲ್ಡರ್, ಅಬ್ದುಲ್ ಸಮದ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್.
PublicNext
25/09/2021 07:17 pm