ಅಬುಧಾಬಿ: ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಿ ರಾಜಸ್ಥಾನ್ ರಾಯಲ್ಸ್ ತಂಡವು ಬ್ಯಾಟಿಂಗ್‌ನಲ್ಲಿ ವೈಫಲ್ಯ ಮೆರೆದ ಪರಿಣಾಮ ಡೆಲ್ಲಿ ಕ್ಯಾಪಿಟಲ್ಸ್ 33 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಅಬುಧಾಬಿಯಲ್ಲಿ ಐಪಿಎಲ್ 14ನೇ ಆವೃತ್ತಿಯ ಭಾಗವಾಗಿ ನಡೆದ 36ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡವು 6 ವಿಕೆಟ್ ನಷ್ಟಕ್ಕೆ 154 ಗಳಿಸಿತ್ತು. ಬಳಿಕ 155 ರನ್‌ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಲು ಮಾತ್ರ ಶಕ್ತವಾಯಿತು. ಆರ್‌ಆರ್ ಪರ ನಾಯಕ ಸಂಜು ಸ್ಯಾಮ್ಸನ್ (ಅಜೇಯ 70 ರನ್) ಹಾಗೂ ಮಹಿಪಾಲ್ ಲೊಮರ್ (19 ರನ್) ಹೊರತು ಪಡಿಸಿದರೆ ಉಳಿದ ಆಟಗಾರರು ಎರಡಂಕಿ ರನ್ ಗಡಿ ದಾಟಲಿಲ್ಲ.
PublicNext
25/09/2021 07:29 pm