ಶಾರ್ಜಾ: ಪಂಜಾಬ್ ಕಿಂಗ್ಸ್ ತಂಡವು ಮತ್ತೆ ಬ್ಯಾಟಿಂಗ್ ವೈಫಲ್ಯ ಪ್ರದರ್ಶನ ನೀಡಿದ ಪರಿಣಾಮ ಸನ್ ರೈಸರ್ಸ್ ಹೈದರಾಬಾದ್‌ಗೆ 126 ರನ್‌ಗಳ ಸಾಧಾರಣ ಗುರಿ ನೀಡಿದೆ.
ಐಪಿಎಲ್ 14ನೇ ಆವೃತ್ತಿಯ ಭಾಗವಾಗಿ ನಡೆಯುತ್ತಿರುವ 36ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡವು 7 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಲು ಶಕ್ತವಾಯಿತು. ಪಂಜಾಬ್ ಪರ ನಾಯಕ ಕೆ.ಎಲ್.ರಾಹುಲ್ (21 ರನ್) ಹಾಗೂ ಐಡೆನ್ ಮಾರ್ಕ್ರಮ್ (27 ರನ್) ಗಳಿಸಿದರು. ಯುನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್, ಮಯಾಂಕ್ ಅಗರ್ವಾಲ್ ಸೇರಿದಂತೆ ಪ್ರಮುಖ ಬ್ಯಾಟ್ಸ್‌ಮನ್‌ಗಳು 20 ರನ್‌ಗಳ ಗಡಿ ದಾಟುವಲ್ಲಿ ವಿಫಲರಾದರು.
ಇನ್ನು ಹೈದರಾಬಾದ್ ತಂಡದ ಪರ ಜೇಸನ್ ಹೋಲ್ಡರ್ 3 ವಿಕೆಟ್ ಕಿತ್ತು ಮಿಂಚಿದರು. ಉಳಿದಂತೆ ಸಂದೀಪ್ ಶರ್ಮಾ, ಅಬ್ದುಲ್ ಸಮದ್, ರಶೀದ್ ಖಾನ್ ಹಾಗೂ ಭುವನೇಶ್ವರ್ ಕುಮಾರ್ ತಲಾ ಒಂದು ವಿಕೆಟ್ ಪಡೆದು ತಂಡಕ್ಕೆ ಆಸರೆಯಾದರು.
PublicNext
25/09/2021 09:19 pm