ಆರಂಭದಿಂದಲೂ ಗೆಲುವಿನ ಲಯದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಐಪಿಎಲ್ ದ್ವಿತಿಯಾರ್ಧದಲ್ಲಿ ಗೆಲುವಿನ ದಾರಿ ಹಿಡಿದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಇಂದು ಅಬುಧಾಬಿಯಲ್ಲಿ ಮಹತ್ವದ ಪಂದ್ಯ ಆರಂಭವಾಗಿದೆ. ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
9 ಪಂದ್ಯಗಳಲ್ಲಿ 7 ಗೆಲುವಿನೊಂದಿಗೆ 14 ಅಂಕಗಳನ್ನು ಗಳಿಸಿರುವ ಚೆನ್ನೈ ಎರಡನೇ ಸ್ಥಾನದಲ್ಲಿದ್ದರೆ, 9 ಪಂದ್ಯಗಳಲ್ಲಿ 4 ಗೆಲುವುಗಳೊಂದಿಗೆ 8 ಅಂಕಗಳನ್ನು ಕೆಕೆಆರ್ ಪಡೆದು ನಾಲ್ಕನೇ ಸ್ಥಾನದಲ್ಲಿದೆ.
ಈ ಪಂದ್ಯದಲ್ಲಿ ಗೆದ್ದರೆ ಚೆನ್ನೈ ಅಗ್ರಸ್ಥಾನಕ್ಕೆ ಏರುವ ಸಾಧ್ಯತೆ ಇದೆ. ಆದರೆ, ಪ್ಲೇ ಆಫ್ ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಕೋಲ್ಕತ್ತಾ ನೈಟ್ ರೈಡರ್ಸ್ ಗೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಅಲ್ಲದೆ, ಎರಡೂ ತಂಡಗಳ ಬ್ಯಾಟಿಂಗ್ ಮತ್ತು ಬೌಲಿಂಗ್ ಬಲಿಷ್ಠವಾಗಿದ್ದು, ಯಾವ ತಂಡ ಗೆಲುವು ಸಾಧಿಸಲಿದೆ ಎಂಬುವುದನ್ನು ಕಾದು ನೋಡೋಣ
PublicNext
26/09/2021 03:16 pm