ಅಬುಧಾಬಿ: ನಾಯಕ ಎಂ.ಎಸ್.ಧೋನಿ ಹಾಗೂ ಅನುಭವಿ ಆಟಗಾರ ಸುರೇಶ್ ರೈನಾ ಬ್ಯಾಟಿಂಗ್ ವೈಫಲ್ಯದ ನಡುವೆಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೊನೆಯ ಎಸೆತದಲ್ಲಿ 2 ವಿಕೆಟ್‌ಗಳಿಂದ ರೋಚಕ ಗೆಲುವು ಸಾಧಿಸಿದೆ.
ಐಪಿಎಲ್ 14ನೇ ಆವೃತ್ತಿಯ ಭಾಗವಾಗಿ ಅಬುಧಾಬಿಯಲ್ಲಿ ನಡೆದ 38ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ತಂಡವು 6 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತ್ತು. ಬಳಿಕ 172 ರನ್‌ಗಳ ಗುರಿ ಬೆನ್ನತ್ತಿದ ಚೆನ್ನೈ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು. ತಂಡದ ಪರ ಋತುರಾಜ್ ಗಾಯಕ್ವಾಡ 40 ರನ್, ಫಾಫ್ ಡುಪ್ಲೆಸ್ಸಿಸ್ 44 ರನ್, ಮೋಯಿನ್ ಅಲಿ 32 ರನ್, ರವೀಂದ್ರ ಜಡೇಜಾ 22 ರನ್ ಗಳಿಸಿದರು.
ಚೆನ್ನೈ ನಾಯಕ ಎಂ.ಎಸ್. ಧೋನಿ 1 ರನ್ ಹಾಗೂ ಸುರೇಶ್ ರೈನಾ 11 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ಕೊನೆಯಲ್ಲಿ ರವೀಂದ್ರ ಜಡೇಜಾ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಪ್ರಸಿದ್ಧ್ ಕೃಷ್ಣ ಎಸೆದ 19ನೇ ಓವರ್‌ನಲ್ಲಿ ಜಡೇಜಾ ಎರಡು ಬೌಂಡರಿ, ಎರಡು ಸಿಕ್ಸರ್ ಸಿಡಿಸಿದರು. ಇದರೊಂದಿಗೆ ತಂಡಕ್ಕೆ ಗೆಲುವು ತಂದುಕೊಟ್ಟರು.
ಕೋಲ್ಕತ್ತಾ ತಂಡದ ಪರ ಸುನಿಲ್ ನರೈನ್ 3 ವಿಕೆಟ್ ಪಡೆದರೆ, ಕನ್ನಡಿಗ ಪ್ರಸಿದ್ಧ್ ಕೃಷ್ಣ, ಲಾಕಿ ಫರ್ಗೂಸನ್, ವರುಣ್ ಚಕ್ರವರ್ತಿ ಹಾಗೂ ಆ್ಯಂಡ್ರೆ ರಸೆಲ್ ತಲಾ ಒಂದು ವಿಕೆಟ್ ಕಿತ್ತರು.
PublicNext
26/09/2021 07:29 pm