ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ನ 39ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಬಿಗಿದೆ.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್ ವೆಲ್ (56) ಅವರ ಅರ್ಧಶತಕದ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 165 ರನ್ ಪೇರಿಸಿದೆ.
ಉಭಯ ತಂಡಗಳು ದ್ವಿತಿಯಾರ್ಧದಲ್ಲಿ ಸೋಲಿನಿಂದ ಕಂಗೆಟ್ಟಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿತ್ತು.
ಈ ಅನಿವಾರ್ಯತೆಯನ್ನು ಮರೆಯದ ಆರ್ ಸಿಬಿ 54 ರನ್ ಗಳ ಜಯ ಗಳಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹರ್ಷಲ್ ಪಟೇಲ್ ಇತಿಹಾಸ ನಿರ್ಮಿಸಿದ್ದಾರೆ. ಐಪಿಎಲ್ 2021 ರಲ್ಲಿ ಹ್ಯಾಟ್ರಿಕ್ ಪಡೆದ ಹರ್ಷಲ್ ತಂಡದ ಗೆಲುವಿಗೆ ಪ್ರಮುಖ ಕೊಡುಗೆ ನೀಡಿದರು. ಜೊತೆಗೆ ಮುಂಬೈ ಇಂಡಿಯನ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಪ್ರಮುಖ 4 ವಿಕೆಟ್ ಪಡೆದರು. ಹರ್ಷಲ್ ಪಟೇಲ್ ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್ ಮತ್ತು ರಾಹುಲ್ ಚಾಹರ್ ಅವರನ್ನು ಔಟ್ ಮಾಡುವ ಮೂಲಕ ತಮ್ಮ ಐಪಿಎಲ್ ಹ್ಯಾಟ್ರಿಕ್ ಪೂರ್ಣಗೊಳಿಸಿದರು. ಈ ಮೂಲಕ ಹ್ಯಾಟ್ರಿಕ್ ಪಡೆದ ಮೂರನೇ ಆರ್ಸಿಬಿ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
PublicNext
26/09/2021 11:17 pm