ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂಗ್ಲೆಂಡ್‌ನ ಆಲ್ ರೌಂಡ್ ಕ್ರಿಕೆಟಿಗ ಮೊಯೀನ್ ಅಲಿ ನಿವೃತ್ತಿ ಘೋಷಣೆ

ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಯುವ ಆಲ್ ರೌಂಡರ್ ಆಟಗಾರ ಮೋಯಿನ್ ಅಲಿ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.

ಇಂಗ್ಲೆಂಡ್‌ ಟೆಸ್ಟ್‌ ತಂಡದ ನಾಯಕ ಜೋ ರೂಟ್‌, ಹೆಡ್‌ ಕೋಚ್‌ ಕ್ರಿಸ್‌ ಸಿಲ್ವರ್‌ವುಡ್‌ ಹಾಗೂ ರಾಷ್ಟ್ರೀಯ ಆಯ್ಕೆದಾರರಿಗೆ ಕಳೆದ ಒಂದು ವಾರದ ಹಿಂದೆಯೇ ಈ ವಿಷಯವನ್ನು ಅಲಿ ತಿಳಿಸಿದ್ದರಂತೆ. ಸೀಮಿತ ಓವರ್ ಗಳ ಕ್ರಿಕೆಟ್​ಗೆ ಹೆಚ್ಚಿನ ಒತ್ತು ನೀಡುವ ಸಲುವಾಗಿ ಟೆಸ್ಟ್ ಮಾದರಿಗೆ ವಿದಾಯ ಹೇಳಿರುವುದಾಗಿ ಅಲಿ ಕಾರಣ ತಿಳಿಸಿದ್ದಾರೆ.

34ರ ಹರೆಯದ ಮೊಯೀನ್ ಅಲಿ ಇದುವರೆಗೆ 64 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದಾರೆ. 2014ರಲ್ಲಿ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಇವರು 28.3ರ ಸರಾಸರಿಯಲ್ಲಿ 2914 ರನ್ ಗಳಿಸಿದ್ದಾರೆ. ಐದು ಶತಕ ಮತ್ತು 14 ಅರ್ಧಶತಕ ಗಳಿಸಿದ್ದಾರೆ. ಉಪಯುಕ್ತ ಸ್ಪಿನ್ನರ್ ಆಗಿರುವ ಮೋಯಿನ್ ಅಲಿ ಟೆಸ್ಟ್ ಕ್ರಿಕೆಟ್ ನಲ್ಲಿ 195 ವಿಕೆಟ್ ಕಬಳಿಸಿದ್ದಾರೆ.

Edited By : Nagaraj Tulugeri
PublicNext

PublicNext

27/09/2021 10:48 am

Cinque Terre

27.12 K

Cinque Terre

0

ಸಂಬಂಧಿತ ಸುದ್ದಿ