ದುಬೈ: ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್‌ರೌಂಡರ್ ಹರ್ಷಲ್ ಪಟೇಲ್ ಈಗಾಗಲೇ ಪರ್ಪಲ್ ಕ್ಯಾಪ್ ಪಡೆದುಕೊಂಡಿದ್ದಾರೆ. ಈಗ ಹ್ಯಾಟ್ರಿಕ್ ಸಾಧನೆಯ ಗರಿಯೂ ಹರ್ಷಲ್ ಮುಡಿಗೇರಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಹರ್ಷಲ್ ಪಟೇಲ್ ಈ ಅದ್ಭುತ ಸಾಧನೆ ಮಾಡಿದ್ದಾರೆ. ಈ ಮೂಲಕ ಐಪಿಎಲ್‌ನಲ್ಲಿ ಹ್ಯಾಟ್ರಿಕ್ ಸಾಧಿಸಿದ 17 ನೇ ಬೌಲರ್ (ಆರ್‌ಸಿಬಿಯ ಮೂರನೇ ಬೌಲರ್) ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಐಪಿಎಲ್‌ನಲ್ಲಿ ಅತಿ ಹೆಚ್ಚು ಹ್ಯಾಟ್ರಿಕ್ ವಿಕೆಟ್ ಕಿತ್ತ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಇದ್ದಾರೆ. ಅವರು 3 ಬಾರಿ ಈ ಸಾಧನೆ ಮಾಡಿದ್ದಾರೆ. ಅವರ ನಂತರ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ (2) ಇದ್ದಾರೆ. ಐಪಿಎಲ್ ಹ್ಯಾಟ್ರಿಕ್ ದಾಖಲೆ ಮಾಡಿದ ಮೊದಲ ಬೌಲರ್ ಲಕ್ಷ್ಮೀಪತಿ ಬಾಲಾಜಿ. ವಿಶೇಷವೆಂದರೆ ರೋಹಿತ್ ಶರ್ಮಾ ಕೂಡ ಐಪಿಎಲ್‌ನಲ್ಲಿ ಹ್ಯಾಟ್ರಿಕ್ ಪಡೆದಿದ್ದಾರೆ.
PublicNext
27/09/2021 04:28 pm