ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL: ದಿನೇಶ್ ಕಾರ್ತಿಕ್ ಮುಖಕ್ಕೆ ಬ್ಯಾಟ್ ಬೀಸಿದ ರಿಷಭ್ ಪಂತ್

ಶಾರ್ಜಾ: ಡೆಲ್ಲಿ ನಾಯಕ ರಿಷಭ್ ಪಂತ್ ಅವರು ಇಂದಿನ ಪಂದ್ಯದಲ್ಲಿ ಕೆಕೆಆರ್ ಬ್ಯಾಟ್ಸ್‌ಮನ್‌ ಕಮ್ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರ ಮುಖಕ್ಕೆ ಬ್ಯಾಟ್ ಬೀಸಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ 41ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೆಕೆಆರ್ ಮೂರು ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್‌ ಇನ್ನಿಂಗ್ಸ್‌ ವೇಳೆ ಬ್ಯಾಟಿಂಗ್ ಮಾಡುತ್ತಿದ್ದ ರಿಷಭ್ ಪಂತ್ ಅವರು ವಿಕೆಟ್ ಕೀಪಿಂಗ್ ಮಾಡುತ್ತಿದ್ದ ದಿನೇಶ್ ಕಾರ್ತಿಕ್ ಅವರ ಮುಖದತ್ತ ಬ್ಯಾಟ್ ಬೀಸಿದ್ದಾರೆ. ಆದರೆ ಬ್ಯಾಟ್ ಕಾರ್ತಿಕ್ ಅವರ ಮುಖಕ್ಕೆ ಬಡಿದಿಲ್ಲ. ಬದಲಿಗೆ ಸ್ವಲ್ಪದರಲ್ಲಿ ಆಗಬಹುದಾಗಿದ್ದ ಅನಾಹುತ ತಪ್ಪಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Edited By : Vijay Kumar
PublicNext

PublicNext

28/09/2021 08:38 pm

Cinque Terre

198.16 K

Cinque Terre

2

ಸಂಬಂಧಿತ ಸುದ್ದಿ