ಅಬುಧಾಬಿ: ಭಾರೀ ಕುತೂಹಲ ಕೆರಳಿಸಿದ್ದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು 6 ವಿಕೆಟ್‌ಗಳಿಂದ ರೋಚಕ ಗೆಲುವು ಸಾಧಿಸಿದೆ.
ಅಬುಧಾನಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಸ್ 14ನೇ ಆವೃತ್ತಿಯ 42ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ ತಂಡವು 136 ರನ್‌ಗಳ ಗುರಿ ನೀಡಿತ್ತು. ಈ ಸಾಧಾರಣ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ತಂಡವು 4 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿ ಗೆಲುವು ದಾಖಲಿಸಿತು. ಮುಂಬೈ ಪರ ಸೌರಭ್ ತಿವಾರಿ 45 ರನ್, ಹಾರ್ದಿಕ್ ಪಾಂಡ್ಯ 40 ರನ್, ಕೀರನ್ ಪೊಲ್ಲಾರ್ಡ್ 15 ರನ್ ಹಾಗೂ ಕ್ವಿಂಟನ್ ಡಿ ಕಾಕ್ 27 ರನ್ ಗಳಿಸಿದರು. ಇನ್ನು ಪಂಜಾಬ್ ಪರ ರವಿ ಬಿಷ್ಣೋಯ್ 2 ವಿಕೆಟ್ ಕಿತ್ತರೆ, ಮೊಹಮ್ಮದ್ ಶಮಿ ಹಾಗೂ ನಾಥನ್ ಎಲ್ಲಿಸ್ ತಲಾ 1 ವಿಕೆಟ್ ಪಡೆದರು.
ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಪಂಜಾಬ್ ತಂಡವು 6 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಲು ಶಕ್ತವಾಗಿತ್ತು. ತಂಡದ ಪರ ಐಡೆನ್ ಮಾರ್ಕ್ರಮ್ 42 ರನ್ (29 ಎಸೆತ, 6 ಬೌಂಡರಿ), ಹಾಗೂ ದೀಪಕ್ ಹೂಡಾ 28 ರನ್ (26 ಎಸೆತ, 1 ಬೌಂಡರಿ, 1 ಸಿಕ್ಸ್) ಹಾಗೂ ನಾಯಕ ಕೆ.ಎಲ್.ರಾಹುಲ್ 21 ರನ್ ಗಳಿಸಿದ್ದರು.
ಇನ್ನು ಮುಂಬೈ ಪರ ಕೀರನ್ ಪೊಲ್ಲಾರ್ಡ್ ಹಾಗೂ ಜಸ್‌ಪ್ರೀತ್ ಬುಮ್ರಾ ತಲಾ ಎರಡು ವಿಕೆಟ್ ಕಿತ್ತರೆ, ಕೃನಾಲ್ ಪಾಂಡ್ಯ ಹಾಗೂ ರಾಹುಲ್ ಚಹರ್ ತಲಾ ಒಂದು ವಿಕೆಟ್ ಪಡೆದಿದ್ದರು.
PublicNext
28/09/2021 11:21 pm