ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2021 : ಆರ್ಸಿಬಿ vs ಆರ್ ಆರ್: ಗೆಲುವಿನ ಲಯಕ್ಕೆ ಮರಳುವವರಾರು…

ದುಬೈ : ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಇಂದು ಬುಧವಾರ ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ 2021ರ ಐಪಿಎಲ್ ಟೂರ್ನಿಯ 43ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಿ ಆತ್ಮವಿಶ್ವಾಸದಲ್ಲಿರುವ ಆರ್ ಸಿಬಿ ತಂಡ, ಸತತ 2 ಸೋಲು ಅನುಭವಿಸಿ ಕಂಗೆಟ್ಟಿರುವ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ಸವಾಲನ್ನು ಸ್ವೀಕರಿಸಲು ಸಜ್ಜಾಗಿದೆ.

10 ಪಂದ್ಯಗಳಿಂದ 12 ಅಂಕ ಹೊಂದಿರುವ ಆರ್ ಸಿಬಿ ಪ್ಲೇ-ಆಫ್ ನತ್ತ ಒಂದು ಹೆಜ್ಜೆ ಮುಂದಿಡಲು ಎದುರು ನೋಡುತ್ತಿದೆ. ಮತ್ತೊಂದೆಡೆ ಸತತ 2 ಪಂದ್ಯಗಳಲ್ಲಿ ಸೋತಿರುವ ರಾಯಲ್ಸ್ ಗೆ ಇದು ನಿರ್ಣಾಯಕ ಪಂದ್ಯವೆನಿಸಿದೆ.

ಇನ್ನೊಂದೆಡೆ ರಾಜಸ್ಥಾನ ಸರಿಯಾದ ಸಂಯೋಜನೆಯೊಂದಿಗೆ ಕಣಕ್ಕಿಳಿಯಲು ಪರದಾಡುತ್ತಿದೆ. ನಾಯಕ ಸಂಜು ಸ್ಯಾಮ್ಸನ್ ಏಕಾಂಗಿ ಹೋರಾಟ ಫಲ ನೀಡುತ್ತಿಲ್ಲ. ಬೌಲರ್ ಗಳೂ ದೊಡ್ಡ ಮಟ್ಟದಲ್ಲಿ ಕೊಡುಗೆ ನೀಡದೆ ಇರುವುದು ತಂಡದ ತಲೆನೋವು ಹೆಚ್ಚಿಸಿದೆ.

ಸಂಭವನೀಯ ಆಟಗಾರರ ಪಟ್ಟಿ

ಆರ್ಸಿಬಿ: ವಿರಾಟ್ ಕೊಹ್ಲಿ(ನಾಯಕ), ದೇವದತ್ ಪಡಿಕ್ಕಲ್, ಶ್ರೀಕರ್ ಭರತ್, ಗ್ಲೆನ್ ಮ್ಯಾಕ್ಸ್ವೆಲ್, ಎಬಿ ಡಿ ವಿಲಿಯರ್ಸ್, ಡೇನಿಯಲ್ ಕ್ರಿಶ್ಚಿಯನ್, ಕೈಲ್ ಜೇಮಿಸನ್, ಶಾಬಾಜ್ ಅಹಮ್ಮದ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಹಲ್.

ರಾಜಸ್ಥಾನ ರಾಯಲ್ಸ್: ಯಶಸ್ವಿ ಜೈಸ್ವಾಲ್, ಎವಿನ್ ಲೆವಿಸ್, ಸಂಜು ಸ್ಯಾಮ್ಸನ್(ನಾಯಕ), ಮಹಿಪಾಲ್ ಲೊಮ್ರಾರ್, ಲಿಯಾಮ್ ಲಿವಿಂಗ್ಸ್ಟೋನ್, ರೆಯಾನ್ ಪರಾಗ್, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಜಯದೇವ್ ಉನಾದ್ಕತ್, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕಾರಿಯಾ.

Edited By : Nirmala Aralikatti
PublicNext

PublicNext

29/09/2021 11:35 am

Cinque Terre

33.15 K

Cinque Terre

9

ಸಂಬಂಧಿತ ಸುದ್ದಿ