ದುಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 14ನೇ ಆವೃತ್ತಿಯ 43ನೇ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಆರ್‌ಆರ್ ಎರಡೂ ತಂಡಗಳಿಗೂ ಗೆಲುವು ಅಗತ್ಯವಾಗಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಪರ ಜಾರ್ಜ್ ಗಾರ್ಟನ್ ಪದಾರ್ಪಣೆ ಮಾಡಿದ್ದಾರೆ.
ತಂಡ ಹೀಗಿದೆ:
ಆರ್‌ಸಿಬಿ: ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಕೆಎಸ್ ಭರತ್, ಗ್ಲೆನ್ ಮ್ಯಾಕ್ಸ್ವೆಲ್, ಎಬಿ ಡಿ ವಿಲಿಯರ್ಸ್, ಡ್ಯಾನ್ ಕ್ರಿಸ್ಟಿಯನ್, ಶಹಬಾಜ್ ಅಹ್ಮದ್, ಜಾರ್ಜ್ ಗಾರ್ಟನ್, ಹರ್ಷಲ್ ಪಟೇಲ್, ಯಜುವೇಂದ್ರ ಚಹಲ್, ಮೊಹಮ್ಮದ್ ಸಿರಾಜ್.
ಆರ್‌ಆರ್ ತಂಡ: ಎವಿನ್ ಲೆವಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಲಿಯಾಮ್ ಲಿವಿಂಗ್ಸ್ಟೋನ್, ಮಹಿಪಾಲ್ ಲೊಮ್ರೋರ್, ರಿಯಾನ್ ಪರಗ್, ರಾಹುಲ್ ತೆವಾಟಿಯಾ, ಕ್ರಿಸ್ ಮಾರಿಸ್, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ, ಮುಸ್ತಾಫಿಜುರ್ ರಹಮಾನ್.
PublicNext
29/09/2021 07:24 pm