ಶಾರ್ಜಾ: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 14ನೇ ಆವೃತ್ತಿಯ 44 ಪಂದ್ಯದಲ್ಲಿ ಹೈದರಾಬಾದ್ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇದುವರೆಗೂ 10 ಪಂದ್ಯಗಳನ್ನಾಡಿದ್ದು 8 ಪಂದ್ಯಗಳಲ್ಲಿ ಗೆದ್ದು, 2 ಪಂದ್ಯಗಳಲ್ಲಿ ಮಾತ್ರ ಸೋಲುವುದರ ಮೂಲಕ 16 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದು, ಪ್ಲೇ ಆಫ್ ಹಂತಕ್ಕೆ ತನ್ನ ಪ್ರವೇಶವನ್ನು ಸುಗಮವಾಗಿಸಿಕೊಂಡಿದೆ. ಅತ್ತ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಅತಿ ಕಳಪೆ ಪ್ರದರ್ಶನ ನೀಡಿರುವ ತಂಡ ಎನಿಸಿಕೊಂಡಿರುವ ಸನ್ ರೈಸರ್ಸ್ ಹೈದರಾಬಾದ್ ಟೂರ್ನಿಯಲ್ಲಿ ಇದುವರೆಗೂ 10 ಪಂದ್ಯಗಳನ್ನಾಡಿ ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆದ್ದು, ಬರೋಬ್ಬರಿ 8 ಪಂದ್ಯಗಳಲ್ಲಿ ಸೋತು 4 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.
ತಂಡ ಹೀಗಿದೆ:
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಟಿ ರಾಯುಡು, ಸುರೇಶ್ ರೈನಾ, ಎಂಎಸ್ ಧೋನಿ, ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಜೋಶ್ ಹೇಜಲ್‌ವುಡ್
ಸನ್ ರೈಸರ್ಸ್ ಹೈದರಾಬಾದ್: ಜೇಸನ್ ರಾಯ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಪ್ರಿಯಾಮ್ ಗಾರ್ಗ್, ಅಭಿಷೇಕ್ ಶರ್ಮಾ, ಜೇಸನ್ ಹೋಲ್ಡರ್, ಅಬ್ದುಲ್ ಸಾದಮ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಸಿದ್ದಾರ್ಥ್ ಕೌಲ್
PublicNext
30/09/2021 07:21 pm