ಶಾರ್ಜಾ: ಅಕ್ಷರ್ ಪಟೇಲ್, ಅವೇಶ್ ಖಾನ್ ಬೌಲಿಂಗ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಗೆ 130 ರನ್‌ಗಳ ಗುರಿ ನೀಡಿದೆ.
ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 14ನೇ ಆವೃತ್ತಿಯ 46ನೇ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಇದರೊಂದಿಗೆ ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 8 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿದೆ. ಮುಂಬೈ ಪರ ಸೂರ್ಯಕುಮಾರ್ ಯಾದವ್ 33 ರನ್, ಕ್ವಿಂಟನ್ ಡಿ ಕಾಕ್ 19 ರನ್ ಗಳಿಸಿದರು.
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಅಕ್ಷರ್ ಪಟೇಲ್ ಹಾಗೂ ಅವೇಶ್ ಖಾನ್ ತಲಾ 3 ವಿಕೆಟ್ ಕಿತ್ತರೆ, ಎನ್ರಿಚ್ ನಾಕಿಯಾ ಹಾಗೂ ರವೀಂದ್ರ ಅಶ್ವಿನ್ ತಲಾ ಒಂದು ವಿಕೆಟ್ ಉರುಳಿಸಿದರು.
PublicNext
02/10/2021 05:25 pm