ಶಾರ್ಜಾ: ಮುಂಬೈ ಇಂಡಿಯನ್ಸ್ ವಿರುದ್ಧ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬ್ಯಾಟಿಂಗ್‌ನಲ್ಲಿ ವೈಫಲ್ಯ ತೋರಿದರೂ 4 ವಿಕೆಟ್‌ಗಳಿಂದ ರೋಚಕ ಗೆಲವು ಸಾಧಿಸಿದೆ.
ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆದ ಐಪಿಎಲ್ 14ನೇ ಆವೃತ್ತಿಯ 46ನೇ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತ್ತು. ಇದರೊಂದಿಗೆ ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ129 ರನ್ ಗಳಿಸಿತ್ತು. 130 ರನ್‌ಗಳ ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ಡೆಲ್ಲಿ ತಂಡವು 5 ಎಸೆತಗಳು ಬಾಕಿನಿರುವಂತೆ 6 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿ ಗೆಲುವು ದಾಖಲಿಸಿದೆ.
ಡೆಲ್ಲಿ ಪರ ಶ್ರೇಯಸ್ ಅಯ್ಯರ್ ಅಜೇಯ 33 ರನ್, ನಾಯಕ ರಿಷಭ್ ಪಂತ್ 26 ರನ್ ಹಾಗೂ ಆರ್.ಅಶ್ವಿನ್ ಅಜೇಯ 20 ರನ್ ಗಳಿಸಿದರು.
ಇದಕ್ಕೂ ಮುನ್ನ ಮುಂಬೈ 8 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿತ್ತು. ತಂಡದ ಪರ ಸೂರ್ಯಕುಮಾರ್ ಯಾದವ್ 33 ರನ್, ಕ್ವಿಂಟನ್ ಡಿ ಕಾಕ್ 19 ರನ್ ಗಳಿಸಿದ್ದರು. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಅಕ್ಷರ್ ಪಟೇಲ್ ಹಾಗೂ ಅವೇಶ್ ಖಾನ್ ತಲಾ 3 ವಿಕೆಟ್ ಕಿತ್ತರೆ, ಎನ್ರಿಚ್ ನಾಕಿಯಾ ಹಾಗೂ ರವೀಂದ್ರ ಅಶ್ವಿನ್ ತಲಾ ಒಂದು ವಿಕೆಟ್ ಉರುಳಿಸಿದ್ದರು.
PublicNext
02/10/2021 07:31 pm