ಅಬುಧಾಬಿ: ಋತುರಾಜ್ ಗಾಯಕ್ವಾಡ ಅಬ್ಬರದ ಶತಕ ಹಾಗೂ ಕೊನೆಯಲ್ಲಿ ರವೀಂದ್ರ ಜಡೇಜಾ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 190 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿದೆ.
ಅಬುಧಾಬಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 14ನೇ ಆವೃತ್ತಿಯ 47ನೇ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಫೀಲ್ಡಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು 4 ವಿಕೆಟ್ ನಷ್ಟಕ್ಕೆ 189 ರನ್ ಚಚ್ಚಿತು. ತಂಡದ ಪರ ಋತುರಾಜ್ ಗಾಯಕ್ವಾಡ 101 ರನ್ (60 ಎಸೆತ, 9 ಬೌಂಡರಿ, 5 ಸಿಕ್ಸ್), ರವೀಂದ್ರ ಜಡೇಜಾ 32 ರನ್ (15 ಎಸೆತ, 4 ಬೌಂಡರಿ, 1 ಸಿಕ್ಸರ್) ಹಾಗೂ ಫ್ಲಾಪ್ ಡು ಪ್ಲೆಸಿಸ್ 25 ರನ್ ಗಳಿಸಿದರು.
ರಾಜಸ್ಥಾನ್ ರಾಯಲ್ಸ್ ಪರ ರಾಹುಲ್ ತಿವೇಟಿಯಾ 3 ವಿಕೆಟ್, ಚೇತನ್ ಸಕಾರಿಯಾ ಒಂದು ವಿಕೆಟ್ ಪಡೆದರು.
PublicNext
02/10/2021 09:36 pm