ಅಬುಧಾಬಿ: ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಐಪಿಎಲ್ ನಲ್ಲಿ ವೇಗದ ಅರ್ಧಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಜೈಸ್ವಾಲ್ ಈ ವಿಶೇಷ ಸಾಧನೆ ಮಾಡಿದ್ದಾರೆ. ಐಪಿಎಲ್ ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆ.ಎಲ್.ರಾಹುಲ್ ಅವರ ಹೆಸರಿನಲ್ಲಿದೆ. ಅವರು ಕೇವಲ 14 ಎಸೆತಗಳಲ್ಲಿ 51 ರನ್ (4 ಬೌಂಡರಿ, 6 ಸಿಕ್ಸ್) ಸಿಡಿಸಿದ್ದರು. ಈ ಪಟ್ಟಿಯಲ್ಲಿ ಜೈಸ್ವಾಲ್ 25ನೇ ಸ್ಥಾನದಲ್ಲಿದ್ದಾರೆ.
PublicNext
02/10/2021 10:30 pm