ಶಾರ್ಜಾ: ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ ೧೪ನೇ ಆವೃತ್ತಿಯ ೪೮ನೇ ಪಂದ್ಯದ ಉಭಯ ತಂಡಗಳಿಗೆ ಬಹುಮುಖ್ಯವಾಗಿದೆ. ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದರೆ ಪ್ಲೇ ಆಫ್ ಪ್ರವೇಶ ಖಚಿತವಾಗಲಿದೆ.
ತಂಡಗಳು ಹೀಗಿವೆ:
ಆರ್‌ಸಿಬಿ: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕರ್ ಭಾರತ್, ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಡಾನ್ ಕ್ರಿಶ್ಚಿಯನ್, ಶಹಬಾಜ್ ಅಹ್ಮದ್, ಜಾರ್ಜ್ ಗಾರ್ಟನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಾಹಲ್.
ಪಂಜಾಬ್ ಕಿಂಗ್ಸ್: ಕೆಎಲ್ ರಾಹುಲ್ (ನಾಯಕ & ವಿಕೆಟ್ ಕೀಪರ್), ಮಯಾಂಕ್ ಅಗರ್ವಾಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ಸರ್ಫರಾಜ್ ಖಾನ್, ಶಾರುಖ್ ಖಾನ್, ಮೊಯಿಸ್ ಹೆನ್ರಿಕ್ಸ್, ಹರ್ಪ್ರೀತ್ ಬ್ರಾರ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.
PublicNext
03/10/2021 03:14 pm