ಶಾರ್ಜಾ: ಗ್ಲೆನ್ ಮ್ಯಾಕ್ಸ್‌ವೆಲ್ ಅರ್ಧಶತಕ ಹಾಗೂ ದೇವದತ್ ಪಡಿಕ್ಕಲ್ ಸಮಯೋಚಿತ ಬ್ಯಾಟಿಂಗ್ ಸಹಾಯದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ತಂಡಕ್ಕೆ 165 ರನ್‌ಗಳ ಗುರಿ ನೀಡಿದೆ.
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 14ನೇ ಆವೃತ್ತಿಯ 48ನೇ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆರ್‌ಸಿಬಿ 7 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ತಂಡದ ಪರ ಗ್ಲೇಸ್ ಮ್ಯಾಕ್ಸ್‌ವೆಲ್ 57 ರನ್ (33 ಎಸೆತ, 3 ಬೌಂಡರಿ, 4 ಸಿಕ್ಸ್), ದೇವದತ್ ಪಡಿಕ್ಕಲ್ 40 ರನ್, ನಾಯಕ ವಿರಾಟ್ ಕೊಹ್ಲಿ 25 ರನ್ ಹಾಗೂ ಎಬಿ ಡಿವಿಲಿಯರ್ಸ್ 23 ರನ್ ಗಳಿಸಿದರು.
ಇನ್ನು ಪಂಜಾಬ್ ಕಿಂಗ್ಸ್ ಪರ ಮೊಯಿಸ್ ಹೆನ್ರಿಕ್ಸ್ 3 ವಿಕೆಟ್ ಕಿತ್ತರೆ, ಇನ್ನಿಂಗ್ಸ್‌ನ ಕೊನೆಯ ಓವರ್‌ನಲ್ಲಿ ಮೊಹಮ್ಮದ್ ಶಮಿ 3 ವಿಕೆಟ್ ಪಡೆದುಕೊಂಡರು.
PublicNext
03/10/2021 05:15 pm