ಅಬುಧಾಬಿ: "ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶನಿವಾರ (ಅಕ್ಟೋಬರ್ 2) ನಡೆದಿದ್ದ ಪಂದ್ಯದ ಬಳಿಕ ನನ್ನ ಬ್ಯಾಟಿಗೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಸಹಿ ಹಾಕಿದರು. ಇದರಿಂದ ನನಗೆ ತುಂಬಾ ಖುಷಿಯಾಗಿದೆ" ಎಂದು ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಹೇಳಿದ್ದಾರೆ.
ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ನಡೆದಿದ್ದ ಐಪಿಎಲ್ 14ನೇ ಆವೃತ್ತಿಯ 47ನೇ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ರಾಜಸ್ಥಾನ್ ತಂಡವು ಚೆನ್ನೈ ವಿರುದ್ಧ 7 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿತ್ತು. ಜೈಸ್ವಾಲ್ 42 ಎಸೆತಗಳಲ್ಲಿ 64 ರನ್ ಹಾಗೂ ಶಿವಂ ದುಬೆ 21 ಎಸೆತಗಳಲ್ಲಿ 50 ರನ್ ಚಚ್ಚಿದ್ದರು.
PublicNext
04/10/2021 07:48 am