ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಸೋಮವಾರ) ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ಸವಾಲನ್ನು ಎದುರಿಸುತ್ತಿದೆ. ಅಂಕಪಟ್ಟಿಯಲ್ಲಿ ಅಗ್ರ ಎರಡು ಸ್ಥಾನಗಳಲ್ಲಿರುವ ಡೆಲ್ಲಿ ಹಾಗೂ ಚೆನ್ನೈ ಈಗಾಗಲೇ ಪ್ಲೇ-ಆಫ್ ಹಂತಕ್ಕೆ ಲಗ್ಗೆಯಿಟ್ಟಿದೆ. ಇಂದು ಅಗ್ರಸ್ಥಾನಕ್ಕಾಗಿ ಹೋರಾಟ ನಡೆಯಲಿದೆ.
ಸದ್ಯ ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ದೆಹಲಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಸ್ಮಿತ್ ಬದಲು ರಿಪಾಲ್ ಪಟೇಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರಿಪಾಲ್ ಇಂದು ಪದಾರ್ಪಣೆ ಮಾಡುತ್ತಿದ್ದಾರೆ. ಚೆನ್ನೈ ತಂಡದಲ್ಲಿ ಮಹತ್ವದ 3 ಬದಲಾವಣೆ ಮಾಡಲಾಗಿದೆ.
ದೆಹಲಿ ತಂಡ:
ಪೃಥ್ವಿ ಶಾ, ಶಿಖರ್ ಧವನ್, ರಿಪಾಲ್ ಪಟೇಲ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಶಿಮ್ರೊನ್ ಹೆಟ್ಮೆಯರ್, ಅಕ್ಸರ್ ಪಟೇಲ್, ಆರ್ ಅಶ್ವಿನ್, ಕಾಗಿಸೋ ರಬಾಡಾ, ಅನ್ರಿಚ್ ನೊರ್ಜೆ, ಅವೇಶ್ ಖಾನ್
ಚೆನ್ನೈ ಸೂಪರ್ ಕಿಂಗ್ಸ್ ತಂಡ:
ರುತುರಾಜ್ ಗಾಯಕ್ವಾಡ್, ಫಾಫ್ ಡುಪ್ಲೆಸಿಸ್, ಮೊಯಿನ್ ಆಲಿ, ಅಂಬಾಟಿ ರಾಯುಡು, ರಾಬಿನ್ ಉತ್ತಪ್ಪ, ಎಂಎಸ್ ಧೋನಿ, ರವೀಂದ್ರ ಜಡೇಜಾ, ಸ್ಯಾಮ್ ಕುರನ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಜೋಶ್ ಹೇಜಲ್ವುಡ್
PublicNext
04/10/2021 07:09 pm