ಶಾರ್ಜಾ: ರಾಜಸ್ಥಾನ್ ರಾಯಲ್ಸ್ ಬ್ಯಾಟಿಂಗ್ ವೈಫಲ್ಯದಿಂದಾಗಿ ಮುಂಬೈ ವಿರುದ್ಧ ಹೀನಾಯ ಸೋಲು ಕಂಡಿದೆ.
ಐಪಿಎಲ್ 14ನೇ ಆವೃತ್ತಿಯ ಭಾಗವಾಗಿ ನಡೆದ 51ನೇ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಮುಂಬೈ ತಂಡವು ರಾಜಸ್ಥಾನ್ ತಂಡವನ್ನು ಕಟ್ಟಿ ಹಾಕುವಲ್ಲಿ ಸಫಲವಾಯಿತು. ಪರಿಣಾಮ ರಾಜಸ್ಥಾನ್ ತಂಡವು 9 ವಿಕೆಟ್ ನಷ್ಟಕ್ಕೆ ಕೇವಲ 90 ರನ್ ಗಳಿಸಲು ಶಕ್ತ ವಾಯಿತು.
91 ರನ್‌ಗಳ ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ 8.2 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 94 ಚಚ್ಚಿ ಗೆಲುವು ಸಾಧಿಸಿತು. ಮುಂಬೈ ಪರ ಇಶಾನ್ ಕಿಶನ್ ಅಜೇಯ 50 ರನ್ ಹಾಗೂ ನಾಯಕ ರೋಹಿತ್ ಶರ್ಮಾ 22 ರನ್ ಗಳಿಸಿದರು.
PublicNext
05/10/2021 10:35 pm