ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2021: ಇಂದು ಆರ್‌ಸಿಬಿ, ಹೈದರಾಬಾದ್‌ ನಡುವೆ ಹಣಾಹಣಿ

ಅಬುಧಾಬಿ: ಐಪಿಎಲ್ 14ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಬಹುತೇಕ ಮುಗಿಯುವ ಹಂತಕ್ಕೆ ತಲುಪಿದ್ದು, ಪ್ಲೇ ಆಫ್ ಪಂದ್ಯಗಳ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಇಂದು ನಡೆಯಲಿರುವ 52ನೇ ಪಂದ್ಯದಲ್ಲಿ ಬಲಿಷ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಸನ್‌ ರೈಸರ್ಸ್ ಹೈದರಾಬಾದ್‌ ಸೆಣಸಲಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 16 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದರೆ, ಕೇವಲ 4 ಅಂಕಗಳನ್ನು ಪಡೆದುಕೊಂಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಸೀಮಿತವಾಗಿದೆ.

ಸಂಭಾವ್ಯ ತಂಡಗಳು:

ಆರ್‌ಸಿಬಿ ಸಂಭಾವ್ಯ ತಂಡ: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕರ್ ಭಾರತ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿ ವಿಲಿಯರ್ಸ್, ಶಹಬಾಜ್ ಅಹ್ಮದ್, ಡೇನಿಯಲ್ ಕ್ರಿಶ್ಚಿಯನ್, ಜಾರ್ಜ್ ಗಾರ್ಟನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್

ಹೈದರಾಬಾದ್ ಸಂಭಾವ್ಯ ತಂಡ: ಜೇಸನ್ ರಾಯ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಪ್ರಿಯಮ್ ಗಾರ್ಗ್, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಸಿದ್ದಾರ್ಥ್ ಕೌಲ್

Edited By : Vijay Kumar
PublicNext

PublicNext

06/10/2021 04:10 pm

Cinque Terre

25.49 K

Cinque Terre

0

ಸಂಬಂಧಿತ ಸುದ್ದಿ