ಗದಗ: ಕ್ರಿಕೆಟ್ ಆಡುತ್ತಿದ್ದ ವೇಳೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಸರ್ಕಾರಿ ಅಧಿಕಾರಿಗಳು ಕೈ ಕೈ ಮಿಲಾಯಿಸಿದ ಘಟನೆ ಜಿಲ್ಲೆಯ ರೋಣ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ.
ಪಿಟ್ ಇಂಡಿಯಾ ಅಭಿಯಾನದಡಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ತಾಲೂಕು ಪಂಚಾಯತಿ ಹಾಗೂ ಆರೋಗ್ಯ ಇಲಾಖೆ ನಡುವೆ ಪಂದ್ಯ ನಡೆದಿತ್ತು.ಆರೋಗ್ಯ ಇಲಾಖೆ ತಂಡದ ಆಟಗಾರ ಸಿಕ್ಸ್ ಬಾರಿಸಿದಾಗ ತಾಲೂಕು ಪಂಚಾಯತಿ ತಂಡದ ಆಟಗಾರ ಕ್ಯಾಚ್ ಹಿಡಿದಿದ್ದಾರೆ. ಆದರೆ ಬೌಂಡರಿ ಲೈನ್ ಟಚ್ ಮಾಡಿ ಕ್ಯಾಚ್ ಹಿಡಿದಿದ್ದಾರೆ ಅಂತ ಆರೋಗ್ಯ ಇಲಾಖೆ ತಂಡದವರು ವಾದ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಎರಡೂ ತಂಡದ ಆಟಗಾರರು ನಡುವೆ ಕೈ ಮಿಲಾಯಿಸಿದ್ದಾರೆ.
ಈ ವೇಳೆ ತಾಲೂಕು ಪಂಚಾಯತಿ ಸಿಬ್ಬಂದಿಯಿಂದ ಆರೋಗ್ಯ ಇಲಾಖೆ ವೈದ್ಯರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ್ದಾರೆ ಎಂಬುವಂತ ಆರೋಪ ಕೇಳಿ ಬಂದಿದೆ.ಸಹನೆ ಕಳೆದುಕೊಂಡ ಸಿಬ್ಬಂದಿಗಳಿಂದ ಪರಸ್ಪರ ಅವಾಚ್ಯ ಶಬ್ದಗಳಿಂದ ಜಗಳ ನಡೆದಿದ್ದು,ರೋಣ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
06/10/2021 04:57 pm