ಅಬುಧಾಬಿ: ಅಂಕಪಟ್ಟಿಯ ಅಗ್ರಸ್ಥಾನದ ಕಡೆಗೆ ಕಣ್ಣಿಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ ಎದುರು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಬುಧವಾರ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ ರೈಸರ್ಸ್ ಹೈದರಾಬಾದ್ ಸವಾಲನ್ನು ಎದುರಿಸುತ್ತಿದೆ.
ಆಗಲೇ ಪ್ಲೇ-ಆಫ್ ಹಂತವನ್ನು ಪ್ರವೇಶಿಸಿರುವ ಆರ್ ಸಿಬಿ ಸದ್ಯ ಅಂಕಪಟ್ಟಿಯಲ್ಲಿ ಅಗ್ರ ಎರಡರಲ್ಲಿ ಸ್ಥಾನ ಪಡೆಯುವುದರತ್ತ ಗುರಿಯರಿಸಿದೆ.
ಆರ್ಸಿಬಿ ಪ್ಲೇಯಿಂಗ್ ಇಲೆವೆನ್
ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಗ್ಲೆನ್ ಮ್ಯಾಕ್ಸ್ವೆಲ್, ಎಬಿ ಡಿ'ವಿಲಿಯರ್ಸ್, ಡೇನಿಯಲ್ ಕ್ರಿಶ್ಚಿಯನ್, ಶಹಬಾಜ್ ಅಹ್ಮದ್, ಶ್ರೀಕರ್ ಭರತ್ (ಕೀಪರ್), ಜಾರ್ಜ್ ಗಾರ್ಟನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್.
ಎಸ್ಆರ್ಎಚ್ ಪ್ಲೇಯಿಂಗ್ ಇಲೆವೆನ್
ಜೇಸನ್ ರಾಯ್, ವೃದ್ಧಿಮಾನ್ ಸಹಾ (ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಪ್ರಿಯಮ್ ಗರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಿದ್ದಾರ್ಥ್ ಕೌಲ್, ಉಮ್ರಾನ್ ಮಲಿಕ್.
PublicNext
06/10/2021 07:26 pm