ಅಬುಧಾಬಿ: ಜೇಸನ್ ರಾಯ್ ಹಾಗೂ ನಾಯಕ ಕೇನ್ ವಿಲಿಯಮ್ಸನ್ ಸಮಯೋಚಿತ ಬ್ಯಾಟಿಂಗ್ ಸಹಾಯದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 142 ರನ್‌ಗಳ ಗುರಿ ನೀಡಿದೆ.
ಅಬುಧಾಬಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 14ನೇ ಆವೃತ್ತಿಯ 52ನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲ ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡವು 7 ವಿಕೆಟ್ ನಷ್ಟಕ್ಕೆ 141 ರನ್ ಗಳಿಸಿತು. ತಂಡದ ಪರ ಜೇಸನ್ ರಾಯ್ 44 ರನ್ ಹಾಗೂ ನಾಯಕ ಕೇನ್ ವಿಲಿಯಮ್ಸನ್ 31 ರನ್ ಗಳಿಸಿದರು.
ಇನ್ನು ಆರ್ ಸಿಬಿ ಪರ ಹರ್ಷಲ್ ಪಟೇಲ್ 3 ವಿಕೆಟ್ ಕಿತ್ತು ಮಿಂಚಿದರೆ, ಡ್ಯಾನ್ ಕ್ರಿಸ್ಟಿಯನ್ 2 ವಿಕೆಟ್, ಜಾರ್ಜ್ ಗಾರ್ಟನ್ ಹಾಗೂ ಯಜುವೇಂದ್ರ ಚಹಾಲ್ ತಲಾ ಒಂದು ವಿಕೆಟ್ ಪಡೆದು ತಂಡಕ್ಕೆ ಆಸರೆಯಾದರು.
PublicNext
06/10/2021 09:17 pm