ಶಾರ್ಜಾ: ಶುಭ್ಮನ್ ಗಿಲ್ ಅರ್ಧಶತಕ ಹಾಗೂ ವೆಂಕಟೇಶ್ ಅಯ್ಯರ್ ಅಬ್ಬರದ ಬ್ಯಾಟಿಂಗ್ ಸಹಾಯದಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 172 ರನ್‌ಗಳ ಗುರಿ ನೀಡಿದೆ.
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 14ನೇ ಆವೃತ್ತಿಯ 54ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡರು. ಇದರೊಂದಿಗೆ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 4 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ತಂಡದ ಪರ ಶುಭ್ಮನ್ ಗಿಲ್ 56 ರನ್, ವೆಂಕಟೇಶ್ ಅಯ್ಯರ್ 38 ರನ್ ಗಳಿಸಿದರು.
PublicNext
07/10/2021 09:31 pm