ಅಬುಧಾಬಿ: ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ಮುಂಬೈ ಇಂಡಿಯನ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 236 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿದೆ.
ಐಪಿಎಲ್ 14 ಆವೃತ್ತಿಯ ಭಾಗವಾಗಿ ಅಬುಧಾಬಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 55ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಬ್ಯಾಟಿಂಗ್ ಮಾಡಿದ ಮುಂಬೈ ತಂಡವು ಮೈದಾನದಲ್ಲಿ ಸಿಕ್ಸರ್, ಬೌಂಡರಿ ಮಳೆ ಸುರಿಸಿತು. ಇಶಾನ್ ಕಿಶನ್ (84 ರನ್) ಹಾಗೂ ಸೂರ್ಯಕುಮಾರ್ ಯಾದವ್ (82 ರನ್) ಸಹಾಯದಿಂದ ಮುಂಬೈ ತಂಡವು 9 ವಿಕೆಟ್ ನಷ್ಟಕ್ಕೆ 235 ರನ್ ದಾಖಲಿಸಿತು.
PublicNext
08/10/2021 09:38 pm