ದುಬೈ: ಗ್ಲೇನ್ ಮ್ಯಾಕ್ಸ್‌ವೆಲ್ ಹಾಗೂ ಶ್ರೀಕರ್ ಭರತ್ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೊನೆಯ ಎಸೆತದಲ್ಲಿ 7 ವಿಕೆಟ್‌ಗಳಿಂದ ರೋಚಕ ಗೆಲುವು ಸಾಧಿಸಿದೆ.
ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 14ನೇ ಆವೃತ್ತಿಯ 56ನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್ ಸಿಬಿ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡವು 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತ್ತು. 165 ರನ್‌ಗಳ ಗುರಿ ಬೆನ್ನಟ್ಟಿದ ಆರ್ ಸಿಬಿ 3 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು.
ಆರ್ ಸಿಬಿ ಪರ ಶ್ರೀಕರ್ ಭರತ್ ಅಜೇಯ 78 ರನ್ ಹಾಗೂ ಗ್ಲೇನ್ ಮ್ಯಾಕ್ಸ್‌ವೆಲ್ 51 ರನ್ ಗಳಿಸಿದರು.
PublicNext
08/10/2021 11:16 pm