ದುಬೈ: ಐಪಿಎಲ್ 14ನೇ ಆವೃತ್ತಿಯ ಲೀಗ್ ಪಂದ್ಯಗಳು ಮುಕ್ತಾಯಗೊಂಡು ಫೈನಲ್ ಘಟ್ಟ ತಲುಪಿದೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಎರಡನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಫೈನಲ್ ಪ್ರವೇಶಕ್ಕೆ ಇಂದು ಫೈಟ್ ನಡೆಯಲಿದೆ.
ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ರಾತ್ರಿ 7:30 ರಿಂದ ಪಂದ್ಯ ಆರಂಭವಾಗಲಿದೆ. ಮೊದಲ ಕ್ವಾಲಿಫೈಯರ್ ಹೋರಾಟದಲ್ಲಿ ಗುರು ಎಂ.ಎಸ್.ಧೋನಿ ವಿರುದ್ಧ ಶಿಷ್ಯ ರಿಷಭ್ ಪಂತ್ ಮುಖಾಮುಖಿ ಆಗಲಿದ್ದಾರೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡವು ನೇರವಾಗಿ ಫೈನಲ್ ಪ್ರವೇಶ ಪಡೆಯಲಿದೆ. ಇನ್ನು ಸೋತ ತಂಡಕ್ಕೆ ಮತ್ತೊಂದು ಅವಕಾಶ ಕೂಡ ಸಿಗಲಿದೆ.
ಹೌದು. ನಾಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಎಲಿಮೆಂಟರ್ ಪಂದ್ಯ ನಡೆಯಲಿದ್ದು, ಇದರಲ್ಲಿ ಗೆಲುವು ಸಾಧಿಸುವ ತಂಡದ ಜೊತೆಗೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡವು ಸೆಣಸಲಿದೆ.
ಕ್ವಾಲಿಫೈಯರ್ 2 ಪಂದ್ಯವು ಅಕ್ಟೋಬರ್ 13ರಂದು ನಡೆಯಲಿದೆ. ಇದರಲ್ಲಿ ಗೆದ್ದ ತಂಡವು ಫೈನಲ್ ಪಂದ್ಯಕ್ಕೆ ಎಂಟ್ರಿ ಕೊಡಲಿದೆ.
PublicNext
10/10/2021 11:30 am