ದುಬೈ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಎರಡನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನೇರ ಫೈನಲ್ ಪ್ರವೇಶಕ್ಕೆ ಫೈಟ್ ನಡೆಯಲಿದೆ. ಉಭಯ ತಂಡಗಳ ಆಟಗಾರರಲ್ಲಿ ಅಷ್ಟೇನು ಬದಲಾವಣೆ ಮಾಡಿಕೊಂಡಿಲ್ಲ. ಹಿಂದಿನ ಪಂದ್ಯದಲ್ಲಿ ಆಡಿದವರೇ ಮುಂದುವರೆದಿದ್ದಾರೆ.
ತಂಡ ಹೀಗಿದೆ:
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ ಹಾಗೂ ವಿಕೆಟ್ ಕೀರಪ್), ಶಿಮ್ರಾನ್ ಹೆಟ್ಮೀರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಟಾಮ್ ಕರ್ರನ್, ಕಾಗಿಸೊ ರಬಾಡಾ, ಅವೇಶ್ ಖಾನ್, ಅನ್ರಿಚ್ ನಾರ್ಕಿಯಾ.
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ರಾಬಿನ್ ಉತ್ತಪ್ಪ, ಅಂಬಾಟಿ ರಾಯುಡು, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಜೋಶ್ ಹ್ಯಾಜಲ್‌ವುಡ್.
PublicNext
10/10/2021 07:17 pm