ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2021 | DC vs CSK: ಉತ್ತಪ್ಪ, ಋತುರಾಜ್ ಅರ್ಧಶತಕದಿಂದ ಚೆನ್ನೈಗೆ ಗೆಲುವು- ಫೈನಲ್‌ಗೆ ಧೋನಿ ಪಡೆ ಎಂಟ್ರಿ

ದುಬೈ: ರಾಬಿನ್ ಉತ್ತಪ್ಪ ಹಾಗೂ ಋತುರಾಜ್ ಗಾಯಕ್ವಾಡ್ ಸ್ಫೋಟಕ ಅರ್ಧ ಶತಕ, ಕೊನೆಯಲ್ಲಿ ನಾಯಕ ಎಂ.ಎಸ್.ಧೋನಿ ಅಬ್ಬರದ ಬ್ಯಾಟಿಂಗ್ ಸಹಾಯದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 4 ವಿಕೆಟ್‌ಗಳಿಂದ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ಫೈನಲ್‌ಗೆ ಎಂಟ್ರಿ ಕೊಟ್ಟಿದೆ.

ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 14ನೇ ಆವೃತ್ತಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಫೀಲ್ಡಿಂಗ್ ಆಯ್ದುಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ತಂಡವು 5 ವಿಕೆಟ್‌ ನಷ್ಟಕ್ಕೆ 172 ರನ್‌ ಗಳಿಸಿತ್ತು. 173 ರನ್‌ಗಳ ಟಾರ್ಗೆಟ್ ಬೆನ್ನತ್ತಿದ ಚೆನ್ನೈ ತಂಡವು 2 ಎಸೆತಗಳು ಬಾಕಿ ಇರುವಂತೆ 6 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಲು ಶಕ್ತವಾಯಿತು.

ಚೆನ್ನೈ ತಂಡದ ಪರ ಋತುರಾಜ್ ಗಾಯಕ್ವಾಡ್ 70 ರನ್ (50 ಎಸೆತ, 5 ಬೌಂಡರಿ, 2 ಸಿಕ್ಸರ್), ರಾಬಿನ್ ಉತ್ತಪ್ಪ 63 ರನ್ (44 ಎಸೆತ, 7 ಬೌಂಡರಿ, 2 ಸಿಕ್ಸರ್) ಹಾಗೂ ನಾಯಕ ಎಂ.ಎಸ್‌.ಧೋನಿ 18 ರನ್ (6 ಎಸೆತ, 3 ಬೌಂಡರಿ, 1 ಸಿಕ್ಸರ್) ಚಚ್ಚಿ ತಂಡಕ್ಕೆ ಗೆಲುವು ತಂದುಕೊಟ್ಟರು. ಇನ್ನು ಡೆಲ್ಲಿ ಪರ ಟಾಮ್ ಕರ್ರನ್ 3 ವಿಕೆಟ್ ಕಿತ್ತು ಮಿಂಚಿದರೆ, ಅನ್ರಿಕ್ ನಾರ್ಟ್ಜೆ ಹಾಗೂ ಅವೇಶ್ ಖಾನ್ ತಲಾ ಒಂದು ವಿಕೆಟ್ ಕಿತ್ತರು.

ಇದಕ್ಕೂ ಮುನ್ನ ಡೆಲ್ಲಿ ಪರ ಪೃಥ್ವಿ ಶಾ 60 ರನ್ (34 ಎಸೆತ, 7 ಬೌಂಡರಿ, 3 ಸಿಕ್ಸರ್), ನಾಯಕ ರಿಷಭ್ ಪಂತ್ ಅಜೇಯ 51 ರನ್ (35 ಎಸೆತ, 3 ಬೌಂಡರಿ, 2 ಸಿಕ್ಸರ್) ಹಾಗೂ ಶಿಮ್ರಾನ್ ಹೆಟ್ಮೆಯರ್ 37 ರನ್‌ ಚಚ್ಚಿದ್ದರು. ಇನ್ನು ಚೆನ್ನೈ ಪರ ಜೋಶ್ ಹ್ಯಾಜಲ್‌ವುಡ್ 2 ವಿಕೆಟ್, ಮೊಯೀನ್ ಅಲಿ, ರವೀಂದ್ರ ಜಡೇಜಾ ಹಾಗೂ ಡ್ವೇನ್ ಬ್ರಾವೋ ತಲಾ ಒಂದು ವಿಕೆಟ್ ಪಡೆದಿದ್ದರು.

Edited By : Vijay Kumar
PublicNext

PublicNext

10/10/2021 11:24 pm

Cinque Terre

49.94 K

Cinque Terre

5

ಸಂಬಂಧಿತ ಸುದ್ದಿ