ಶಾರ್ಜಾ: ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆಯುತ್ತಿರುವ ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿರುವ ಇಂದಿನ ಪಂದ್ಯವು ಉಭಯ ತಂಡಗಳಿಗೆ ಮಹತ್ವದ್ದಾಗಿದೆ. ಇಂದು ಗೆಲ್ಲುವ ತಂಡವು ಬುಧವಾರ ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೋರಾಡಲಿದೆ. ಬುಧವಾರದ ಪಂದ್ಯದಲ್ಲಿ ಜಯ ಗಳಿಸುವ ತಂಡವು ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಬೇಕು.
ತಂಡಗಳು:
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ನಾಯಕ), ದೇವದತ್ತ ಪಡಿಕ್ಕಲ್, ಶ್ರೀಕರ್ ಭರತ್, ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಡ್ಯಾನ್ ಕ್ರಿಸ್ಟಿಯನ್, ಶಾಬಾಜ್ ಅಹಮದ್, ಜಾರ್ಜ್ ಗಾರ್ಟನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಾಹಲ್.
ಕೋಲ್ಕತ್ತ ನೈಟ್‌ರೈಡರ್ಸ್: ಶುಭಮನ್ ಗಿಲ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ದಿನೇಶ್ ಕಾರ್ತಿಕ್, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾಯಕ), ಶಕೀಬ್ ಅಲ್ ಹಸನ್, ಸುನೀಲ್ ನರೈನ್, ಲಾಕಿ ಫರ್ಗ್ಯುಸನ್, ಶಿವಂ ಮಾವಿ, ವರುಣ ಚಕ್ರವರ್ತಿ.
PublicNext
11/10/2021 07:21 pm