ಶಾರ್ಜಾ: ಶಿಖರ್ ಧವನ್, ಶ್ರೇಯಸ್ ಅಯ್ಯರ್ ಹೊರತುಪಡಿಸಿ ಉಳಿದ ಬ್ಯಾಟರ್‌ಗಳು ಇಂದಿನ ಮಹತ್ವದ ಪಂದ್ಯದಲ್ಲೇ ವೈಫಲ್ಯ ತೋರಿದ ಪರಿಣಾಮ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 136 ರನ್‌ಗಳ ಗುರಿ ನೀಡಿದೆ.
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್ 14ನೇ ಆವೃತ್ತಿಯ ಭಾಗವಾಗಿ ಇಂದು ನಡೆಯುತ್ತಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ನಾಯಕ ಇಯಾನ್ ಮಾರ್ಗನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡವು 5 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಲು ಶಕ್ತವಾಯಿತು. ತಂಡದ ಪರ ಶಿಖರ್ ಧವನ್ 36 ರನ್ ಹಾಗೂ ಶಿಖರ್ ಧವನ್ 30 ರನ್ ಗಳಿಸಿದರು.
PublicNext
13/10/2021 09:19 pm