ದುಬೈ: ಬಹು ನಿರೀಕ್ಷಿತ ಟಿ20 ವಿಶ್ವಕಪ್‌ಗಾಗಿ ಟೀಂ ಇಂಡಿಯಾದಲ್ಲಿ ಬಿಸಿಸಿಐ ಆಯ್ಕೆ ಸಮಿತಿಯು ಪ್ರಮುಖ ಬದಲಾವಣೆಯನ್ನು ಘೋಷಿಸಿದೆ. ಈ ಮೊದಲು 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ರನ್ನ ಟೀಮ್ ಇಂಡಿಯಾ ಸೆಲೆಕ್ಷನ್ ಕಮಿಟಿ ಕೈಬಿಟ್ಟಿದೆ. ಅಕ್ಷರ್ ಸ್ಥಾನಕ್ಕೆ ವೇಗಿ ಶಾರ್ದೂಲ್ ಠಾಕೂರ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಸೆಪ್ಟೆಂಬರ್ 8ರಂದು ಬಿಸಿಸಿಐ ಟಿ20 ವಿಶ್ವಕಪ್ಗೆ ಭಾರತ ತಂಡವನ್ನ ಪ್ರಕಟಿಸಿತ್ತು. ಆದರೆ ತಂಡದಲ್ಲಿ ಬದಲಾವಣೆ ಮಾಡಲು ಐಸಿಸಿ, ಅಕ್ಟೋಬರ್ 15ರವರೆಗೂ ಅವಕಾಶ ನೀಡಿತ್ತು. ಹೀಗಾಗಿ ಬಿಸಿಸಿಐ ಮತ್ತು ಟೀಂ ಇಂಡಿಯಾ ಸೆಲೆಕ್ಷನ್ ಕಮಿಟಿ, ಅಕ್ಷರ್ ಪಟೇಲ್ ಬದಲಿಗೆ ಶಾರ್ದೂಲ್ ಠಾಕೂರ್ಗೆ ಮಣೆ ಹಾಕಿ, ಅಂತಿಮ ತಂಡವನ್ನು ಪ್ರಕಟಿಸಿದೆ.
ತಂಡ ಹೀಗಿದೆ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್ , ಶಾರ್ದೂಲ್ ಠಾಕೂರ್, ವರುಣ್ ಚಕ್ರವರ್ತಿ, ಜಸ್ಪ್ರಿತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.
ಸ್ಟ್ಯಾಂಡ್ ಬೈ ಆಟಗಾರರು:
ಅಕ್ಷರ್ ಪಟೇಲ್, ದೀಪಕ್ ಚಹರ್, ಶ್ರೇಯಸ್ ಅಯ್ಯರ್
ನೆಟ್ ಬೌಲರ್ಸ್:
ಆವೇಶ್ ಖಾನ್, ಉಮ್ರಾನ್ ಮಲ್ಲಿಕ್, ಹರ್ಷಲ್ ಪಟೇಲ್, ಲುಕುಮಾ ಮೇರಿವಾಲ, ವೆಂಕಟೇಶ್ ಅಯ್ಯರ್, ಕರಣ್ ಶರ್ಮಾ, ಶಹಬಾಜ್ ಅಹ್ಮದ್, ಕೆ.ಗೌತಮ್
PublicNext
13/10/2021 09:44 pm