ಶಾರ್ಜಾ: ಶುಭ್ಮನ್ ಗಿಲ್ ಹಾಗೂ ವೆಂಕಟೇಶ್ ಅಯ್ಯರ ಉತ್ತಮ ಆರಂಭಿಕ ಜೊತೆಯಾಟದ ಬಳಿಕ ಬ್ಯಾಟಿಂಗ್ ವೈಫಲ್ಯ ಎದುರಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 3 ವಿಕೆಟ್‌ಗಳಿಂದ ರೋಚಕ ಗೆಲುವು ಸಾಧಿಸಿ, ಫೈನಲ್‌ಗೆ ಎಂಟ್ರಿ ಕೊಟ್ಟಿದೆ.
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್ 14ನೇ ಆವೃತ್ತಿಯ ಭಾಗವಾಗಿ ಇಂದು ನಡೆದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ನಾಯಕ ಇಯಾನ್ ಮಾರ್ಗನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡವು 5 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಲು ಶಕ್ತವಾಗಿತ್ತು. 136 ರನ್‌ಗಳ ಗುರಿ ಬೆನ್ನಟ್ಟಿದ ಕೆಕೆಆರ್ ತಂಡವು ಒಂದು ಎಸೆತ ಬಾಕಿ ಇರುವಂತೆ 7 ವಿಕೆಟ್ ನಷ್ಟಕ್ಕೆ136 ರನ್ ಗಳಿಸಿ ಗೆಲುವು ಸಾಧಿಸಿದೆ.
ಕೆಕೆಆರ್ ಪರ ವೆಂಕಟೇಶ್ ಅಯ್ಯರ 55 ರನ್ (41 ಎಸೆತ, 4 ಬೌಂಡರಿ, 3 ಸಿಕ್ಸರ್), ಶುಭ್ಮನ್ ಗಿಲ್ 46 ರನ್ (46 ಎಸೆತ, 1 ಬೌಂಡರಿ, 1 ಸಿಕ್ಸ್) ಚಚ್ಚಿದರು. ಆದರೆ ಬಳಿಕ ಬಂದ ನಿತೀಶ್ ರಾಣಾ 13 ರನ್ ಗಳಿಸಿದರೆ, ದಿನೇಶ್ ಕಾರ್ತಿಕ್ ಹಾಗೂ ನಾಯಕ ಇಯಾನ್ ಮಾರ್ಗನ್ ತಲಾ ಮೂರು ಎಸೆತಗಳನ್ನು ಎದುರಿಸಿ ಯಾವುದೇ ರನ್ ಗಳಿಸಿದೆ ವಿಕೆಟ್ ಒಪ್ಪಿಸಿ ಹೊರ ನಡೆದರು. ಇದು ತಂಡವನ್ನು ಸಂಕಷ್ಟಕ್ಕೆ ದೂಡಿತು. ಬಳಿಕ ಬಂದ ಶಕೀಬ್ ಅಲ್ ಹಸನ್ ಕೂಡ ಇದೇ ಹಾದಿ ಹಿಡಿದರು. ಅವರು ಕೂಡ ಎರಡು ಎಸೆತಗಳನ್ನು ಎದುರಿಸಿ ರನ್ ಗಳಿಸಿದರು ವಿಕೆಟ್ ಕಳೆದುಕೊಂಡರು. ಸಂಕಷ್ಟದ ಸಮಯದಲ್ಲಿ ರಾಹುಲ್ ತ್ರಿಪಾಠಿ ಸಿಕ್ಸ್ ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.
PublicNext
13/10/2021 11:20 pm