ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2021 Final match: ಚೆನ್ನೈ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಕೆಕೆಆರ್

ದುಬೈ: ಐಪಿಎಲ್ 14ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧ ಟಾಸ್ ಗೆದ್ದಿರುವ ಕೋಲ್ಕತ್ತಾ ನೈಟ್‌ ರೈಡರ್ಸ್ ನಾಯಕ ಇಯಾನ್ ಮಾರ್ಗನ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

2012ರ ಐಪಿಎಲ್‌ನ ಫೈನಲ್‌ನಲ್ಲಿಯೂ ಈ ಎರಡು ತಂಡಗಳೇ ಫೈನಲ್‌ಗೆ ಪ್ರವೇಶ ಪಡೆದುಕೊಂಡಿತ್ತು. ಇದೀಗ 9 ವರ್ಷಗಳ ನಂತರ ಈ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ನಾಲ್ಕನೇ ಟ್ರೋಫಿಯ ಮೇಲೆ ಕಣ್ಣಿಟ್ಟಿದ್ದರೆ ಕೊಲ್ಕತ್ತಾ ನೈಟ್ ರೈಡರ್ಸ್ ಈ ಪಂದ್ಯದಲ್ಲಿ ಗೆದ್ದರೆ ಮೂರನೇ ಬಾರಿಗೆ ಐಪಿಎಲ್‌ನ ಚಾಂಪಿಯನ್ ಪಟ್ಟಕ್ಕೇರಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ಈ ಹಿಂದೆ 2010, 2011 ಹಾಗೂ 2018ರ ಐಪಿಎಲ್ ಆವೃತ್ತಿಯಲ್ಲಿ ಗೆದ್ದು ಚಾಂಪಿಯನ್ ಎನಿಸಿತ್ತು. ಮತ್ತೊಂದೆಡೆ ಗೌತಮ್ ಗಂಭೀರ್ ನೇತೃತ್ವದಲ್ಲಿ ಕೆಕೆಆರ್ 2012 ಹಾಗೂ 2014ರ ಐಪಿಎಲ್‌ನಲ್ಲಿ ಚಾಂಪಿಯನ್ ಪಟ್ಟಕ್ಕೇರಿತ್ತು.

ತಂಡ ಹೀಗಿದೆ:

ಕೆಕೆಆರ್: ಶುಭ್ಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯಾನ್ ಮೋರ್ಗನ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಕೀಬ್ ಅಲ್ ಹಸನ್, ಸುನಿಲ್ ನರೈನ್, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ, ಶಿವಂ ಮಾವಿ.

ಸಿಎಸ್‌ಕೆ: ಫಾಫ್ ಡು ಪ್ಲೆಸಿಸ್, ಋತುರಾಜ್ ಗಾಯಕವಾಡ್, ಮೊಯೀನ್ ಅಲಿ, ರಾಬಿನ್ ಉತ್ತಪ್ಪ, ಅಂಬಾಟಿ ರಾಯುಡು, ಎಂ.ಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಡ್ವೇನ್ ಬ್ರಾವೋ, ದೀಪಕ್ ಚಹಾರ್, ಜೋಶ್​ ಹಜಲ್​ವುಡ್​.

Edited By : Vijay Kumar
PublicNext

PublicNext

15/10/2021 07:15 pm

Cinque Terre

76.71 K

Cinque Terre

1

ಸಂಬಂಧಿತ ಸುದ್ದಿ