ದುಬೈ: ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಅಕ್ಟೋಬರ್ 15ರ ಶುಕ್ರವಾರದಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಫೈನಲ್ ಪಂದ್ಯದ ಮೂಲಕ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ತೆರೆಬಿದ್ದಿದೆ.
ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ 15 ಪಂದ್ಯಗಳನ್ನಾಡಿರುವ ಹರ್ಷಲ್ ಪಟೇಲ್ 32 ವಿಕೆಟ್ ಪಡೆದುಕೊಳ್ಳುವುದರ ಮೂಲಕ ಪರ್ಪಲ್ ಕ್ಯಾಪ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಷ್ಟೇ ಅಲ್ಲದೆ ಗೇಮ್ ಚೇಂಜರ್ ಆಫ್ ದಿ ಸೀಸನ್ ಮತ್ತು ಮೋಸ್ಟ್ ವ್ಯಾಲ್ಯುಯೆಬಲ್ ಪ್ಲೇಯರ್ ಆಫ್ ದಿ ಸೀಸನ್ ಪ್ರಶಸ್ತಿಗಳನ್ನೂ ಸಹ ಹರ್ಷಲ್ ಪಟೇಲ್ ಪಡೆದುಕೊಂಡಿದ್ದಾರೆ. ಹೀಗೆ ಒಟ್ಟು 3 ವಿವಿಧ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವ ಹರ್ಷಲ್ ಪಟೇಲ್ ಎಲ್ಲಾ ಪ್ರಶಸ್ತಿಗಳಿಗೂ ತಲಾ 10 ಲಕ್ಷ ಬಹುಮಾನ ಧನ ಪಡೆದುಕೊಂಡಿದ್ದಾರೆ. ಈ ಮೂಲಕ 3 ಪ್ರಶಸ್ತಿಗಳಿಂದ ಒಟ್ಟು 30 ಲಕ್ಷ ರೂಪಾಯಿಗಳನ್ನು ಹರ್ಷಲ್ ಪಟೇಲ್ ತಮ್ಮದಾಗಿಸಿಕೊಂಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಹೀರೋ ಆಗಿ ಮಿಂಚಿದ ಋತುರಾಜ್ ಗಾಯಕ್ವಾಡ್ 16 ಪಂದ್ಯಗಳನ್ನಾಡಿ 635 ರನ್ ಗಳಿಸಿ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಹೀಗೆ ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿದ ಋತುರಾಜ್ ಗಾಯಕ್ವಾಡ್ ಆರೆಂಜ್ ಕ್ಯಾಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದರ ಜೊತೆಗೆ ಎಮರ್ಜಿಂಗ್ ಪ್ಲೇಯರ್ ಆಫ್ ದಿ ಸೀಸನ್ ಪ್ರಶಸ್ತಿಯನ್ನು ಕೂಡ ಋತುರಾಜ್ ಗಾಯಕ್ವಾಡ್ ತಮ್ಮದಾಗಿಸಿಕೊಂಡಿದ್ದಾರೆ. ಈ ಎರಡೂ ಪ್ರಶಸ್ತಿಗಳಿಗೆ ಭಾಜನರಾಗಿರುವ ಋತುರಾಜ್ ಗಾಯಕ್ವಾಡ್ ಒಟ್ಟು 20 ಲಕ್ಷ ರೂಪಾಯಿ ಬಹುಮಾನ ಧನ ಪಡೆದುಕೊಂಡಿದ್ದಾರೆ.
ಹರ್ಷಲ್ ಪಟೇಲ್ ಮತ್ತು ಋತುರಾಜ್ ಗಾಯಕ್ವಾಡ್ ಹೊರತುಪಡಿಸಿ ಉಳಿದ ಕೆಲ ತಂಡಗಳ ವಿವಿಧ ಆಟಗಾರರು ಟೂರ್ನಿ ನಂತರ ವಿತರಿಸಲಾಗುವ ವಿಶೇಷ ಪ್ರಶಸ್ತಿಗೆ ಭಾಜನರಾಗಿದ್ದು ಅವರು ಗಳಿಸಿರುವ ಮೊತ್ತದ ವಿವರ ಈ ಕೆಳಕಂಡಂತಿದೆ.
* ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್: ಶಿಮ್ರಾನ್ ಹೆಟ್ಮಾಯೆರ್ (ಡೆಲ್ಲಿ ಕ್ಯಾಪಿಟಲ್ಸ್) - 10 ಲಕ್ಷ ರೂಪಾಯಿ
* ಅತಿ ಹೆಚ್ಚು ಸಿಕ್ಸರ್ ಪ್ರಶಸ್ತಿ: ಕೆಎಲ್ ರಾಹುಲ್ (ಪಂಜಾಬ್ ಕಿಂಗ್ಸ್) - 10 ಲಕ್ಷ ರೂಪಾಯಿ
* ಪವರ್ ಪ್ಲೇಯರ್ ಆಫ್ ದಿ ಸೀಸನ್: ವೆಂಕಟೇಶ್ ಐಯ್ಯರ್ ( ಕೋಲ್ಕತ್ತಾ ನೈಟ್ ರೈಡರ್ಸ್ ) - 10 ಲಕ್ಷ ರೂಪಾಯಿ
* ಪರ್ಫೆಕ್ಟ್ ಕ್ಯಾಚ್ ಆಫ್ ದಿ ಸೀಸನ್: ರವಿ ಬಿಷ್ಣೋಯಿ (ಪಂಜಾಬ್ ಕಿಂಗ್ಸ್) - 10 ಲಕ್ಷ ರೂಪಾಯಿ
PublicNext
17/10/2021 03:32 pm